ಕೊಪ್ಪಳ ಆಗಸ್ಟ್ ೩೧ : ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮವು ಸೆಪ್ಟಂಬರ್ ೦೧ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್, ದಕ್ಷಿಣ ವಲಯದ ರಾಜ್ಯಗಳ (ಭಾರತ ಸರ್ಕಾರ) ನೆಹರು ಯುವ ಕೇಂದ್ರ ಸಂಘಟನೆ ಬೆಂಗಳೂರು ಪ್ರಾದೇಶಿಕ ನಿರ್ದೇಶಕರಾದ ಎಂ.ಎನ್.ನಟರಾಜ್, ಜಿಲ್ಲಾಧಿಕಾರಿಗಳಾದ ನಲೀನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ ಅವರು ಉಪಸ್ಥಿತರಿರುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಯುವ ಕೇಂದ್ರ ಯುವ ಅಧಿಕಾರಿಗಳಾದ ಮಾಂಟು ಪಾತರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ತಿಮ್ಮಾರೆಡ್ಡಿ ಮೇಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಡಾ.ಭಾಗ್ಯಜೋತಿ ಅವರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
Gadi Kannadiga > State > ಸೆಪ್ಟಂಬರ್ ೦೧ ರಂದು ಜಿಲ್ಲಾ ಮಟ್ಟದ ಯುವ ಉತ್ಸವ
ಸೆಪ್ಟಂಬರ್ ೦೧ ರಂದು ಜಿಲ್ಲಾ ಮಟ್ಟದ ಯುವ ಉತ್ಸವ
Suresh31/08/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023