This is the title of the web page
This is the title of the web page

Please assign a menu to the primary menu location under menu

Local News

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರಿಂದ ಜಿಲ್ಲಾ ಪ್ರಗತಿ ಪರಿಶೀಲನೆ ಜಲಜೀವನ ಮಿಷನ್: ಸಮರ್ಪಕ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಸೂಚನೆ


ಬೆಳಗಾವಿ, ಮೇ. ೨೫: ಗ್ರಾಮೀಣ ಪ್ರದೇಶದ ಜನರ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ಮಹತ್ವಾಕಾಂಕ್ಷೆಯ ಜಲಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಜೂನ್ ೧೫ ರ ವೇಳೆಗೆ ಕಾಮಗಾರಿ ಆರಂಭಿಸಬೇಕು. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹಂತ-೧ ಹಾಗೂ ಹಂತ-೨ ರ ಎಲ್ಲ ಕಾಮಗಾರಿಗಳು ಪೂರ್ಣಗೊಳಿಸಬೇಕು. ಅದೇ ರೀತಿ ಹಂತ-೩ ರ ಯೋಜನೆಗಳನ್ನು ಸಮರ್ಪಕವಾಗಿ ಸಕಾಲದಲ್ಲಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಅದ ಎಲ್.ಕೆ.ಅತೀಕ್ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ(ಮೇ ೨೫) ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಲಜೀವನ ಮಿಷನ್ ಯೋಜನೆಯ ಹಂತ- ೧ ಕಾಮಗಾರಿಗಳ ಪ್ರಗತಿ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಆದ್ದರಿಂದ ಪ್ರಗತಿಯಲ್ಲಿ ಇರುವ ಕಾಮಗಾರಿಗಳನ್ನು ಚುರುಕುಗೊಳಿಸಬೇಕು.ಹಂತ-೨ ರಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಯೋಜನೆಗಳ ಡಿಪಿಆರ್ ಸಮಗ್ರವಾಗಿ ಪರಿಶೀಲಿಸಬೇಕು. ಯಾವುದೇ ಯೋಜನೆಯಲ್ಲಿ ನ್ಯೂನ್ಯತೆ ಇರದಂತೆ ಎಚ್ಚರಿಕೆ ವಹಿಸಬೇಕು. ಡಿಸೆಂಬರ್ ಅಂತ್ಯದವರೆಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.ಜಲಜೀವನ ಮಿಷನ್ ವ್ಯಾಪಕವಾಗಿ ನಡೆಯುತ್ತಿರುವುದರಿಂದ ಯಾವುದೇ ಕಾಮಗಾರಿ ವಿಳಂಬವಾಗಬಾರದು ಎಂದು ಎಲ್.ಕೆ.ಅತೀಕ್ ಸೂಚನೆ ನೀಡಿದರು.
ಚಿಕ್ಕೋಡಿ ವಿಭಾಗದ ೬೬೬ ಕಾಮಗಾರಿಗಳ ಪೈಕಿ ೬೫೨ ಜೂನ್ ೧೫ ರ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಚಿಕ್ಕೋಡಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಬಣಗಾರ ತಿಳಿಸಿದರು.
ಯೋಜನೆಗಳ ಡಿಪಿಆರ್ ತಯಾರಿಸುವಾಗ ಅಧಿಕಾರಿಗಳು ತಾಂತ್ರಿಕ ಅಂಶಗಳನ್ನು ಕೂಲಂಕುಶವಾಗಿ ಪರಿಶೀಲಿಸಬೇಕು. ಹಂತ -೧ ಹಾಗೂ ೨ ರಲ್ಲಿನ ಲೋಪದೋಷಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮದ ಎಲ್ಲ ಪ್ರದೇಶಗಳಿಗೂ ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಬೇಕು ಎಂದು ಹೇಳಿದರು.
ನೀರು ಸಂರಕ್ಷಣಾ ಯೋಜನೆ ಜಾರಿಗೆ ಸೂಚನೆ:
ಕುಡಿಯುವ ನೀರಿನ ಅಭಾವ ಎದುರಾಗಿರುವ ತಾಲ್ಲೂಕುಗಳ ಕುರಿತು ಮಾಹಿತಿಯನ್ನು ಪಡೆದುಕೊಂಡ ಅವರು, ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಅಗತ್ಯಬಿದ್ದರೆ ಖಾಸಗಿ ಕೊಳವೆ ಬಾವಿ ಅಥವಾ ಟ್ಯಾಂಕರ್ ಬಾಡಿಗೆ ಪಡೆಯಬಹುದು ಎಂದು ಹೇಳಿದರು.ಕುಡಿಯುವ ನೀರು ಅಭಾವ ಕಂಡುಬಂದರೆ ಲಭ್ಯವಿರುವ ಅನುದಾನ ಬಳಸಿಕೊಂಡು ಕೂಡಲೇ ನೀರು ಒದಗಿಸಬೇಕು. ನಿರಂತರವಾಗಿ ಹತ್ತು ವರ್ಷಗಳಿಂದ ನೀರಿನ ಅಭಾವ ಇರುವ ಗ್ರಾಮಗಳಲ್ಲಿ ಮುಂದಿನ ಐದಾರು ವರ್ಷಗಳ ಕಾಲ ನರೇಗಾ ಯೋಜನೆಯಡಿ ನೀರು ಸಂರಕ್ಷಣಾ ಯೋಜನೆ ಜಾರಿಗೊಳಿಸಬೇಕು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಿಸಬಹುದು ಎಂದರು.
ಮನೆ ಮನೆಗೆ ತೆರಳಿ ಲಸಿಕೆ ಹಾಕಲು ನಿರ್ದೇಶನ:
೬೦ ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಪ್ರತಿಯೊಂದು ಗ್ರಾಮಗಳಲ್ಲಿ ಜಾಗೃತಿ ಶಿಬಿರಗಳನ್ನು ನಡೆಸಬೇಕು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳ ನೆರವಿನಿಂದ ಮನೆ ಮನೆಗೆ ತೆರಳಿ ಲಸಿಕೆ ಹಾಕಲು ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಕಡೆ ಪಿಡಿಓ ಗಳು ವಾಹನ ವ್ಯವಸ್ಥೆ ಮಾಡಬೇಕು ಎಂದು ಎಲ್.ಕೆ.ಅತೀಕ್ ತಿಳಿಸಿದರು.
ಪೊಲಿಯೋ ಸೇರಿದಂತೆ ಉಳಿದ ಲಸಿಕಾಕರಣ ಕಾರ್ಯಕ್ರಮಗಳನ್ನು ನಿಗದಿತ ವೇಳಾಪಟ್ಟಿಯ ಪ್ರಕಾರ ನಡೆಸಬೇಕು. ಅದೇ ರೀತಿ ಪ್ರೌಢಾವಸ್ಥೆಯ ಶಾಲಾ ವಿದ್ಯಾರ್ಥಿನಿಯರಿಗೆ ಅನಿಮಿಯಾ ನಿಯಂತ್ರಣಕ್ಕೆ ನೀಡಲಾಗುವ ಐ.ಎಫ್.ಎ. ಮಾತ್ರೆಗಳನ್ನು ಕೂಡ ತಪ್ಪದೇ ವಿತರಿಸಬೇಕು ಎಂದು ಹೇಳಿದರು.
ಪ್ರವಾಹ ಸಂದರ್ಭದಲ್ಲಿ ಅಗತ್ಯವಿರುವ ಔಷಧಿ ಸಾಮಗ್ರಿಗಳನ್ನು ದಾಸ್ತಾನು ಇಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಮಾಹಿತಿಯನ್ನು ನೀಡಿದರು.
¸ Áರ್ವಜನಿಕ ಆಸ್ಪತ್ರೆಗಳು, ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಔಷಧಿ ವಿತರಣೆಗೆ ಅಗತ್ಯವಾದ ಅನುದಾನ ಬಿಡುಗಡೆಯಾಗಬೇಕಿದೆ. ಇದಲ್ಲದೇ ಲಸಿಕಾ ವಾಹನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು.
೧೮+ ಮೊದಲ ಹಾಗೂ ಎರಡನೇ ಡೋಸ್ ೧೦೨ ರಷ್ಟು ಗುರಿ ಸಾಧನೆಯಾಗಿದೆ. ಮೊದಲ ಡೋಸ್ ಪಡೆದುಕೊಂಡಿರುವ ೧.೯೦ ಲಕ್ಷ ಜನರು ಎರಡನೇ ಡೋಸ್ ಈ ಜಿಲ್ಲೆಯಲ್ಲಿ ಪಡೆದಿರುವುದಿಲ್ಲ ಎಂದು ಆರ್.ಸಿ.ಎಚ್.ಓ. ಡಾ.ಐ.ಪಿ.ಗಡಾದ ವಿವರಿಸಿದರು.
ಶಾಲೆಗಳಲ್ಲಿ ಮೂಲಸೌಕರ್ಯ ಕಲ್ಪಿಸಿ:
ಶಾಲಾ ದಾಖಲಾತಿ, ಕಟ್ಟಡಗಳ ದುರಸ್ತಿ, ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳ ವಿತರಣೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು, ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತಿತರ ಮೂಲಸೌಕರ್ಯಗಳನ್ನು ಒದಗಿಸುವಂತೆ ತಿಳಿಸಿದರು.
ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಮೈದಾನ ನಿರ್ಮಿಸಬೇಕು ಎಂದು ಯುವಜನ ಸೇವೆ ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ. ಈ ಬಗ್ಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ಸಂಬಂಧಿಸಿದ ಇಲಾಖೆಯ ಜತೆಗೆ ಸಮನ್ವಯ ಮಾಡಿಕೊಂಡು ಸ್ಥಳಗಳನ್ನು ಗುರುತಿಸಿ ಪಟ್ಟಿಯನ್ನು ಸಿದ್ಧಪಡಿಸಬೇಕು ಎಂದು ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರ ದುರಸ್ತಿಗೆ ನಿರ್ದೇಶನ:
ಜಿಲ್ಲೆಯ ೨೦ ಕ್ಕೂ ಅಧಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳ ದುರಸ್ತಿ ಸಂದರ್ಭದಲ್ಲಿ ಆ ಕೇಂದ್ರದಲ್ಲಿ ಅಗತ್ಯವಿರುವ ಕೆಲಸಗಳನ್ನು ಮಾತ್ರ ಕೈಗೆತ್ತಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ತಿಳಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳ ಯಾವುದೇ ದುರಸಯ ಕೆಲಸ ಬಾಕಿ ಉಳಿಯಬಾರದು. ಪಿಎಚ್ ಸಿ ಬಳಿಕ ಸಮಯದಾಯ ಆರೋಗ್ಯ ಕೇಂದ್ರಗಳ ದುರಸ್ತಿ ಕೆಲಸ ಆರಂಭಿಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಮಹಿಳಾ ಮಕ್ಕಳ ಅಭಿವೃದ್ಧಿ ಸೇರಿದಂತೆ ಎಲ್ಲ ಪ್ರಮುಖ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಿದರು.
ಉಪ ವಿಭಾಗಾಧಿಕಾರಿಗಳಾದ ರವೀಂದ್ರ ಕರಲಿಂಗಣ್ಣವರ, ಸಂತೋಷ ಕಾಮಗೌಡ, ಶಶಿಧರ್ ಬಗಲಿ ಸೇರಿದಂತೆ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳು, ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.


Gadi Kannadiga

Leave a Reply