This is the title of the web page
This is the title of the web page

Please assign a menu to the primary menu location under menu

State

ಜಿಲ್ಲಾ ಸ್ವೀಪ್ ಸಮಿತಿ ಸಭೆ : ಮತದಾರರ ಜಾಗೃತಿ ಕಾರ್ಯಕ್ರಮ ಚುರುಕುಗೊಳಿಸಿ


ಗದಗಜನೆವರಿ ೬: ದೇಶದ ಪ್ರಜಾಪ್ರಭುತ್ವ ಬಲಿಷ್ಟಗೊಳಿಸುವಲ್ಲಿ ಮತದಾನವು ಪ್ರಮುಖ ಪಾತ್ರ ವಹಿಸಲಿದೆ. ಈ ನಿಟ್ಟಿನಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಸ್ವೀಪ್ ಸಮಿತಿಯಿಂದ ಇನ್ನಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ. ತಿಳಿಸಿದರು. ಜಿಲ್ಲಾ ಪಂಚಾಯತ್‌ನ ವಿಡಿಯೋ ಕಾನ್ಫರನ್ಸ್ ಹಾಲ್‌ದಲ್ಲಿ ಶುಕ್ರವಾರದಂದು ಜರುಗಿದ ಸ್ವೀಪ್ ಸಮತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಶಿಕ್ಷಣ ಇಲಾಖೆಯಿಂದ ಮತದಾನದ ಕುರಿತು ಜಾಗೃತಿ ಮೂಡಿಸಲು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಲವಾರು ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದೀಗ ಜನೆವರಿ ೧೨ ರಂದು ಯುವ ದಿನಾಚರಣೆ ದಿನದಂದು ಕಾಲೇಜು ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅಂದು ಬೆಳಿಗ್ಗೆ ೮ ಗಂಟೆಗೆ ಬೆಟಗೇರಿಯಿಂದ ಸೈಕಲ್ ಜಾಥಾ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಭೀಷ್ಮ ಕೆರೆಯ ಆವರಣದಲ್ಲಿರುವ ಬಸವೇಶ್ವರ ಪ್ರತಿಮೆ ಸ್ಥಳಕ್ಕೆ ಬಂದು ತಲುಪಲಿದೆ ಎಂದರು.
ಜನೆವರಿ ೨೫ ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಜಾನಪದ ಕಲಾತಂಡಗಳೊಂದಿಗೆ ಮತದಾನದ ಜಾಗೃತಿ ಜಾಥಾ ಕಾರ್ಯಕ್ರಮ, ಸಹಿ ಆಂದೋಲನ, ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಜನೆವರಿ ೨೬ ರಂದು ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಮತದಾನದ ಕುರಿತು ಘೋಷವಾಕ್ಯಗಳೊಂದಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು. ಈ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಹಭಾಗಿತ್ವ ಅವಶ್ಯಕವಾಗಿದೆ. ಒಟ್ಟಾರೆಯಾಗಿ ಮತದಾನ ಪ್ರಕ್ರಿಯೆಯಲ್ಲಿ ಯುವ ಮತದಾರರನ್ನೊಳಗೊಂಡಂತೆ ಅರ್ಹ ಪ್ರತಿ ಮತದಾರರು ತಮ್ಮ ಮತವನ್ನು ಚಲಾಯಿಸುವಂತೆ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕರಿಸಿದ್ಧಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಗದೀಶ ನುಚ್ಚಿನ್, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರು ಹಾಜರಿದ್ದರು.


Gadi Kannadiga

Leave a Reply