This is the title of the web page
This is the title of the web page

Please assign a menu to the primary menu location under menu

State

ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಣೆ


ಕೊಪ್ಪಳ ಡಿಸೆಂಬರ್ ೦೬: ಕೊಪ್ಪಳ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಡಿಸೆಂಬರ್ ೦೬ ರಂದು ಅಂಬೇಡ್ಕರ್ ಅವರ ಪುತ್ಥಳಿ ಮತ್ತು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಲಾಯಿತು.
ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿರುವ ಮಹನೀಯರ ಪುತ್ಥಳಿಗೆ ಕೊಪ್ಪಳ ಸಂಸದರಾದ ಕರಡಿ ಸಂಗಣ್ಣ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ್, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಗಳಾದ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಕ್ಷÄ ಗಿರಿ, ಉಪ ವಿಭಾಗಾಧಿಕಾರಿಗಳಾದ ಬಸವಣ್ಣೆಪ್ಪ ಕಲಶೆಟ್ಟಿ, ನಗರಸಭೆ ಸದಸ್ಯರಾದ ಮುತ್ತುರಾಜ ಕುಷ್ಟಗಿ, ನಗರಸಭೆ ಪೌರಾಯುಕ್ತರಾದ ಬೋಜಕ್ಕನವರ್ ಮತ್ತು ಹಲವು ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಒಂದು ನಿಮಿಷಗಳ ಕಾಲ ಮೌನ ಆಚರಣೆ ಮಾಡಲಾಯಿತು.
ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳು ಡಾ.ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು. ಕ್ಯಾಂಡಲ್ ಬೆಳಗಿಸಿ ಗೌರವ ಸಮರ್ಪಿಸಿದರು. ಈ ವೇಳೆ ಒಂದು ನಿಮಿಷಗಳ ಕಾಲ ಮೌನ ಆಚರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಚಿದಾನಂದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಎಂ ದೊಡ್ಡಮನಿ, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ವೈ.ಕಾಳೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಂ.ರೆಡ್ಡೇರ್, ಕೊಪ್ಪಳ ತಹಶೀಲ್ದಾರ ಅಮರೇಶ ಬಿರಾದಾರ್ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.


Gadi Kannadiga

Leave a Reply