ಗದಗ ಡಿ. ೬: ಗದಗ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಮಂಗಳವಾರದಂದು ಡಾ.ಬಿ.ಆರ್.ಅಂಬೇಡ್ಕರ ಅವರ ೬೬ನೇ ಮಹಾಪರಿನಿರ್ವಾಣ ದಿನವನ್ನು ಆಚರಿಸಲಾಯಿತು. ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಎಂ.ಸಿ.ಎ. ಅಧ್ಯಕ್ಷ ಶಿದ್ದಪ್ಪ ಪಲ್ಲೇದ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಅವರುಗಳು ಡಾ. ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಿದರು. ತದನಂತರ ಸಮಾಜ ಕಲ್ಯಾಣ ಇಲಾಖೆ ಉಪನಿದೇರ್ಶಕÀ ಪ್ರಶಾಂತ ವರಗಪ್ಪನವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ ಜರುಗಿತು.
Gadi Kannadiga > State > ಜಿಲ್ಲಾಡಳಿತ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಮಹಾಪರಿನಿರ್ವಾಣ ದಿನ ಆಚರಣೆ