ಗದಗ ಡಿಸೆಂಬರ್ ೮ : ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಪಾರದರ್ಶಕವಾಗಿ ಜರುಗಿಸಲು ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಆಹಾರ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಮತದಾರರ ಪಟ್ಟಿಯ ವೀಕ್ಷಕರಾದ ಡಾ.ಎಂ.ಟಿ.ರೇಜು ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಜರುಗಿದ ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಜಿಲ್ಲಾ ಚುನಾವಣಾಧಿಕಾರಿಗಳು, ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳು ಮತ್ತು ಸಹಾಯಕ ಮತದಾರರ ಪಟ್ಟಿ ಪರಿಷ್ಕರಣೆ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಗ್ರಾಮೀಣ ಹಾಗೂ ನಗರ ಪ್ರದೇಶಗಳಿಂದ ಸ್ವೀಕೃತವಾದಂತಹ ಅರ್ಜಿಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ನೊಂದಾಯಿಸಬೇಕು. ಸ್ವೀಕೃತವಾದಂತಹ ಅರ್ಜಿಗಳಲ್ಲಿನ ಮರಣ ಹೊಂದಿದವರ, ಹೆಸರುಗಳ ತಿದ್ದುಪಡಿ, ವರ್ಗಾವಣೆಗೆ ಸಂಬಂಧಿಸಿದಂತೆ ಸಂಬಂಧಿತ ಅಧಿಕಾರಿಗಳು ಪರಿಶೀಲನೆ ನಡೆಸಿ ಅನುಮೋದನೆ ನೀಡಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಸಾರ್ವಜನಿಕರಿಂದ ಸ್ವೀಕೃತವಾದ ಅರ್ಜಿಗಳನ್ನು ವಿಳಂಬಕ್ಕೆ ಆಸ್ಪದ ನೀಡದೇ ಜಾಗರೂಕತೆಯಿಂದ ವಿಲೇ ಮಾಡಲು ತಿಳಿಸಿದರು. ಮತದಾರರ ಪಟ್ಟಿಯಿಂದ ಕೈ ಬಿಡುವ ಸಂದರ್ಭದಲ್ಲಿ ಸಂಬಂಧಿಸಿದ ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಿ ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿನ ವಿಕಲಚೇತನ ಮತದಾರರ ಮಾಹಿತಿ ಪಡೆದ ಅವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ವಿಕಲಚೇತನರನ್ನು ಗುರುತಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿ ಚುನಾವಣಾ ಗುರುತಿನ ಚೀಟಿ ಒದಗಿಸಲು ಕ್ರಮ ವಹಿಸಲು ಸೂಚಿಸಿದರು.
ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದಂತಹ ಮತದಾರರಿಗೆ ಚುನಾವಣಾ ಗುರುತಿನ ಚೀಟಿ ಪಡೆದುಕೊಂಡಿದ್ದರ ಬಗ್ಗೆ ಪರಿಶೀಲಿಸಬೇಕು. ರಾಜಕೀಯ ಪಕ್ಷಗಳು ಸಹ ಮತದಾರರ ಪಟ್ಟಿಯಲ್ಲಿ ಆಕ್ಷೇಪಗಳನ್ನು ಜಿಲ್ಲಾಡಳಿತದ ಗಮನಕ್ಕೆ ತರಬೇಕು, . ಜಿಲ್ಲೆಯಲ್ಲಿ ಯುವ ಮತದಾರರನ್ನು ಹೆಚ್ಚಿನ ಸಂಖ್ಯೆ ಯಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆ ತೀವ್ರವಾಗಿ ಕಾರ್ಯ ಪ್ರವೃತ್ತವಾಗಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ರಾಜಕೀಯ ಪಕ್ಷಗಳೊಂದಿಗೆ ಸಭೆಯನ್ನು ಜರುಗಿಸಲಾಗಿದೆ. ಜಿಲ್ಲೆಯಲ್ಲಿ ನವೆಂಬರ್ ೮ ರಂದು ಕರಡು ಮತದಾರರ ಪಟ್ಟಿಯಲ್ಲಿ ಪ್ರಕಟಗೊಂಡಂತೆ ೪,೨೫,೮೧೭ ಪುರುಷ ಮತದಾರರು, ೪,೨೧,೫೦೬ ಮಹಿಳಾ ಮತದಾರರು ಇತರೆ ೪೮ ಮತದಾರರು ಸೇರಿದಂತೆ ಒಟ್ಟು ೮,೪೭,೩೭೧ ಮತದಾರರಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ೬೦೨ ಮತಗಟ್ಟೆಗಳು ಹಾಗೂ ನಗರ ಪ್ರದೇಶಗಳಲ್ಲಿ ೩೫೪ ಮತಗಟ್ಟೆಗಳು ಒಟ್ಟಾರೆ ೯೫೬ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಲ್ಲಿ೮೭೨೭ ಮೃತ, ೧೩೦೯೪ ಸ್ಥಳಾಂತರಗೊಂಡ ಹಾಗೂ ೧೬೭೪೫ ಪುನರಾವರ್ತನೆಗೊಂಡಂತಹ ಒಟ್ಟಾರೆ ೩೮೫೬೬ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದರು. ಚುನಾವಣಾ ಗುರುತಿನ ಚೀಟಿಯೊಂದಿಗೆ ಆಧಾರ್ ಜೋಡಣಿ ಕಾರ್ಯ ೭೯.೭೫ ರಷ್ಟಾಗಿದೆ ಎಂದರು.
ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾದಿಕಾರಿ ಡಾ. ಸುಶೀಲಾ ಬಿ ಅವರು ಮಾತನಾಡಿಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಕ್ತ ಕ್ರಿಯಾ ಯೋಜನೆಗಳನ್ನು ಹಮ್ಮಿಕೊಂಡು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ಒಟ್ಟಾರೆ ಚುನಾವಣೆ ಪ್ರಕ್ರಿಯೆಯ ಪ್ರತಿಯೊಂದು ಹಂತಗಳನ್ನು ಮತದಾರರಿಗೆ ತಿಳಿಸಿಕೊಡುವ ಮೂಲಕ ಮತದಾನ ಪ್ರಕ್ರಿಯೆಯಲ್ಲಿ ಅರ್ಹ ಪ್ರತಿ ಮತದಾರರು ತಮ್ಮ ಮತವನ್ನು ಚಲಾಯಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ., ಉಪವಿಭಾಗಾದಿಕಾರಿ ಅನ್ನಪೂರ್ಣ , ಚುನಾವಣಾ ತಹಶೀಲ್ದಾರ ದಾಸಪ್ಪನವರ ಸೇರಿದಂತೆ ತಹಶೀಲ್ದಾರರು, ನೋಡಲ್ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು , ರಾಜಕೀಯ ಪಕ್ಷದ ಪ್ರತಿನಿಧಿಗಳು ಹಾಜರಿದ್ದರು. ತದನಂತರ ಜಿಲ್ಲಾಡಳಿತ ಭವನದ ಚುನಾವಣೆ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತದಾರರ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Gadi Kannadiga > State > ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪಾರದರ್ಶಕವಾಗಿ ಜರುಗಲಿ: ಡಾ. ಎಂ.ಟಿ. ರೇಜು
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023