ಬೆಳಗಾವಿ: ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರು ತಮ್ಮ ಅಧಿಕಾರವಧಿಯಲ್ಲಿ ರೈತರಿಗೆ ಉತ್ತಮ ಮಾರ್ಗದರ್ಶಕರಾಗಿ ದೇಶದ ಅಭಿವೃದ್ಧಿಗೆ ಒಳ್ಳೆಯ ಕಾರ್ಯಗಳನ್ನು ಮಾಡಿ ಹಸಿರು ಕ್ರಾಂತಿಯ ಹರಿಕಾರರೆಂದು ಕೀರ್ತಿ ಪಡೆದಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ
ಡಾಕ್ಟರ್ ಶಶಿಕಾಂತ ಮುನ್ಯಾಳ ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಏರ್ಪಡಿಸಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪ ಪ್ರಧಾನ ಮಂತ್ರಿಗಳಾದ ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆಯಲ್ಲಿ ಡಾ ಬಾಬು ಜಗಜೀವನರಾಮ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ರಾಷ್ಟ್ರದ ಆರ್ಥಿಕ ಬೆಳವಣಿಗೆಯು ಒಂದು ರೀತಿಯಲ್ಲಿ ಕೃಷಿ ಬೆಳವಣಿಗೆಯಾಗಿದೆ ಎಂದು ಡಾಕ್ಟರ್ ಬಾಬು ಜಗಜೀವನ್ ರಾಮ್ ಅವರ ಸಾಧನೆಯನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಹಾಗೂ ಲಸಿಕಾ ಅಧಿಕಾರಿಗಳಾದ ಡಾ ಈಶ್ವರ್ ಗಡದ್, ಜಿಲ್ಲಾ ಸಮಿಕ್ಷಾ ಅಧಿಕಾರಿಗಳಾದ ಡಾ ಬಾಲಕೃಷ್ಣ ತುಕ್ಕಾರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ ಎಂ ವ್ಹಿ ಕಿವಡಸನ್ನವರ , ಕಚೇರಿಯ ಸಹಾಯಕ ಆಡಳಿತಾಧಿಕಾರಿಗಳಾದ ಶ್ರೀರಾಮಚಂದ್ರ ವಾಗಿ, ಹಾಗೂ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.