This is the title of the web page
This is the title of the web page

Please assign a menu to the primary menu location under menu

State

ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ


ಕೊಪ್ಪಳ ಸೆಪ್ಟೆಂಬರ್ ೦೨ : ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಮಕ್ಕಳ ಸಹಾಯವಾಣಿ ಕೇಂದ್ರದ ಉದ್ಘಾಟನೆ ಕಾರ್ಯಕ್ರಮವು ಸೆಪ್ಟೆಂಬರ್ ೦೧ರಂದು ನಡೆಯಿತು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲಾದ ಮಕ್ಕಳ ಸಹಾಯಣಾಣಿ-೧೦೯೮, ತುರ್ತು ಸ್ಪಂದನೆ ಬೆಂಬಲ ವ್ಯವಸ್ಥೆ ಇ.ಆರ್.ಎಸ್.ಎಸ್-೧೧೨ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಚಾಲನೆ ನೀಡಿದರು.
ಮಿಷನ್ ವಾತ್ಸಲ್ಯ ಮಾರ್ಗಸೂಚಿಗಳನ್ವಯ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ೨೪*೭ ಮಕ್ಕಳ ಸಹಾಯವಾಣಿ ಸೇವೆಯನ್ನು ಮಕ್ಕಳ ನ್ಯಾಯ (ಮಕ್ಕಳ ಪೋಷಣೆ & ರಕ್ಷಣೆ) ಕಾಯ್ದೆ-೨೦೧೫ ತಿದ್ದುಪಡಿ ಕಾಯ್ದೆ ೨೦೨೧ರನ್ವಯ ಅನುಷ್ಠಾನಗೊಳಿಸಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಚೈಲ್ಡಲೈನ್ ಇಂಡಿಯಾ ಫೌಂಡೇಶನ್ ಸ್ವಯಂ ಸೇವಾ ಸಂಸ್ಥೆ ವತಿಯಿಂದ ನಡೆಸಲಾಗುತ್ತಿದ್ದ ಮಕ್ಕಳ ಸಹಾಯವಾಣಿ-೧೦೯೮ನ್ನು ಈ ಸಂಸ್ಥೆಯಿಂದ ರಾಜ್ಯ ಸರ್ಕಾರವು ವಹಿಸಿಕೊಂಡು ಇ.ಆರ್.ಎಸ್.ಎಸ್-೧೧೨ರೊಂದಿಗೆ ಏಕೀಕರಣಗೊಳಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳಲ್ಲಿ ಅನುಷ್ಠಾನಗೊಳಿಸಲು ಸೂಚಿಸಿರುವುದರಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಮಕ್ಕಳ ಸಹಾಯವಾಣಿ-೧೦೯೮/ ೧೧೨ ನ್ನು ತಾತ್ಕಾಲಿಕವಾಗಿ ಕಾರ್ಯಾರಂಭ ಮಾಡಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಗಂಗಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ರೋಹಿಣಿ ಕೊಟಗಾರ ಸೇರಿದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಎಲ್ಲ ಸಿಬ್ಬಂದಿ ಮತ್ತು ಮಕ್ಕಳ ಸಹಾಯವಾಣಿ-೧೦೯೮, ಇ.ಆರ್.ಎಸ್.ಎಸ್-೧೧೨ನ ಸಿಬ್ಬಂದಿ ಉಪಸ್ಥಿತರಿದ್ದರು.


Leave a Reply