This is the title of the web page
This is the title of the web page

Please assign a menu to the primary menu location under menu

Local News

ಪಡಿತರ ಚೀಟಿದಾರರ ಇ-ಕೆವೈಸಿ ಸಂಗ್ರಹಣೆ ಜ.10 ರಂದು ಕೊನೆಯ ದಿನ


ಬೆಳಗಾವಿ: ಜಿಲ್ಲೆಯಲ್ಲಿರುವ ಎಲ್ಲ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ಕಾರ್ಯವನ್ನು ಜನವರಿ 10 ರವರೆಗೆ ವಿಸ್ತರಿಸಲಾಗಿದೆ.

ಜಿಲ್ಲೆಯಲ್ಲಿ ಬಾಕಿ ಉಳಿದುಕೊಂಡತಹ ಅರ್ಹ ಎಲ್ಲ ಅಂತ್ಯೋದಯ ಮತ್ತು ಆದ್ಯತಾ (ಪಿಎಚ್ಎಚ್) ಫಲಾನುಭವಿಗಳು ತಮ್ಮ ಕಾರ್ಯ ವ್ಯಾಪ್ತಿಯಲ್ಲಿರುವ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಇ-ಕೆವೈಸಿ ಸಂಗ್ರಹಣೆ ಕಾರ್ಯವನ್ನು ನಿಗದಿತ ದಿನಾಂಕದ ಒಳಗೆ ಮಾಡಿಕೊಳ್ಳಬೇಕು.

ಒಂದು ವೇಳೆ ಇ-ಕೆವೈಸಿ ಬಾಕಿ ಉಳಿದ್ದಲ್ಲಿ ಅಂತಹ ಪಡಿತರ ಫಲಾನುಭವಿಗಳಿಗೆ ಪಡಿತರವನ್ನು ಸರ್ಕಾರವು ಕಡ್ಡಾಯವಾಗಿ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು. ಎಂದು ತಿಳಿಸಲಾಗಿದೆ.

ಜಿಲ್ಲೆಯ ಎಲ್ಲಾ ಫಲಾನುಭವಿಗಳು ಕೊನೆಯ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಇ-ಕೆವೈಸಿ ಮಾಡಿಕೊಳ್ಳುವ ಕ್ರಮ ವಹಿಸಬೇಕು ಎಂದು ಬೆಳಗಾವಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply