This is the title of the web page
This is the title of the web page

Please assign a menu to the primary menu location under menu

State

ಅರ್ಹ ಯುವಕರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೆ ಮುಂದಾಗಿ ಮತದಾರರ ಜಾಗೃತಿ ಕಾರ್ಯಕ್ರಮ ಪರಿಣಾಮಕಾರಿಯಾಗಿ ಆಯೋಜಿಸಿ


ಗದಗ ಡಿಸೆಂಬರ್ ೩: ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಯೇ ಪ್ರಭು. ಪ್ರತಿ ಪ್ರಜೆಯು ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ಗಟ್ಟಿಗೊಳಿಸುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಯುವ ಸಮುದಾಯ ಮತದಾರರ ನೋಂದಣಿ ಮಾಡಿಕೊಂಡು ಪ್ರಜಾತಂತ್ರ ವ್ಯವಸ್ಥೆಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಲು ಪ್ರೇರೇಪಿಸಬೆಕೆಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ ತಿಳಿಸಿದರು. ಜಿಲ್ಲಾ ಪಂಚಾಯತ್ ವಿಡಿಯೋ ಸಭಾಂಗಣದಲ್ಲಿ ಶನಿವಾರ ಜರುಗಿದ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸಮಿತಿ ಸದಸ್ಯರುಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದರು.
ಯುವ ಸಮೂಹವನ್ನು ಮತದಾರರ ಪಟ್ಟಿಗೆ ಸೇರಿಸುವ ನೋಂದಣಿ ಕಾರ್ಯಕ್ಕೆ ಅಭಿಯಾನವನ್ನು ಹಾಗೂ ಮಿಂಚಿನ ನೋಂದಣಿ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಅರ್ಹ ಯುವಕ ಯುವತಿಯರು ತಪ್ಪದೇ ನೋಂದಣಿ ಮಾಡಿಕೊಳ್ಳಬೇಕು ಹಗೂ ಮತದಾನದ ಮಹತ್ವವನ್ನು ಅಧಿಕಾರಿಗಳು ತಿಳಿಸಿಕೊಡುವ ಮೂಲಕ ಮತದಾನದ ಹಕ್ಕನ್ನು ಚಲಾಯಿಸಲು ಪ್ರೇರೇಪಿಸಬೇಕೆಂದು ಹೇಳಿದರು.
ಸರ್ಕಾರಿ ಕಚೇರಿ, ಅನುದಾನಿತ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಹಾಗೂ ಇಲಾಖೆ ಸಂಘ ಸಂಸ್ಥೆಗಳಲ್ಲಿ ವ್ಯವಹರಿಸುವ ಪ್ರತಿ ಅರ್ಹ ಮತದಾರರು ಸಹ ತಮ್ಮ ಮತದಾರರ ಚೀಟಿಗೆ ಆಧಾರ್ ಜೋಡಣಿ ಕಾರ್ಯವನ್ನು ಪೂರ್ಣಗೊಳಿಸಬೇಕು. ಈ ಕಾರ್ಯವನ್ನು ತ್ವರಿತವಾಗಿ ಇಲಾಖಾ ಹಂತದ ಅಧಿಕಾರಿಗಳು ನಿರ್ವಹಿಸಲು ಸೂಚಿಸಿದರು.
ಇಲಾಖಾವಾರು ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಕ್ತ ಕ್ರಿಯಾ ಯೋಜನೆಗಳನ್ನು ಹಮ್ಮಿಕೊಂಡು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಕ್ರಮ ಜರುಗಿಸಭೆಕು. ಒಟ್ಟಾರೆ ಚುನಾವಣೆ ಪ್ರಕ್ರಿಯೆಯ ಪ್ರತಿಯೊಂದು ಹಂತಗಳನ್ನು ಮತದಾರರಿಗೆ ತಿಳಿಸಿಕೊಡುವ ಮೂಲಕ ಮತದಾನ ಪ್ರಕ್ರಿಯೆಯಲ್ಲಿ ಅರ್ಹ ಪ್ರತಿ ಮತದಾರರು ತಮ್ಮ ಮತವನ್ನು ಚಲಾಯಿಸುವಂತೆ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕರಡು ಮತದಾರರ ಯಾದಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ, ತಹಶೀಲ್ದಾರರ ಕಚೇರಿ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ವೆಬ್ ಸೈಟ್ ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ರಲ್ಲಿ ಪ್ರಕಟಿಸಲಾಗಿದೆ. ಕರಡು ಮತದಾರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಗಿಊಂ ಒobiಟe ಂಠಿಠಿ ಮುಖಾಂತರ ಅಥವಾ ತಿತಿತಿ.ಟಿvsಠಿ.iಟಿರ ಮುಖಾಂತರ ಅಥವಾ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಮತಗಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿ.ಎಲ್.ಓ), ಉಪವಿಭಾಗಾಧಿಕಾರಿಗಳ ಕಾರ್ಯಾಲಯ ( ಇಆರ್‌ಓ), ಸಂಬಂಧಪಟ್ಟ ತಹಶೀಲ್ದಾರರ ಕಾರ್ಯಾಲಯಗಳಲ್ಲಿ (ಎಇಆರ್‌ಓ ) ಸ್ವೀಕರಿಸಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಬಸವರಾಜ ಅಡವಿಮಠ ಮಾತನಾಡಿ ೨೦೨೩ , ಜನೆವರಿ ೧ ಕ್ಕೆ ೧೮ ವರ್ಷ ಪೂರ್ಣಗೊಂಡಿರುವವರು ಮತದಾರರ ಯಾದಿಗಳಲ್ಲಿ ಹೆಸರು ಇಲ್ಲದವರು ಈ ಅವಧಿಯಲ್ಲಿ ತಮ್ಮ ಹೆಸರುಗಳನ್ನು ನಮೂನೆ ನಂ.೬ ರಲ್ಲಿ ಸಲ್ಲಿಸಬಹುದು. ೨೦೨೩ ನೇ ವರ್ಷದ ಅರ್ಹತಾ ದಿನಾಂಕಗಳಾದ ೧ನೇ ಎಪ್ರಿಲ್ , ೨೦೨೩ , ೧ ನೇ ಜುಲೈ ೨೦೨೩ ಅಥವಾ ೧ ನೇ ಅಕ್ಟೋಬರ್ ೨೦೨೩ ನೇದ್ದಕ್ಕೆ ೧೮ ವರ್ಷ ವಯಸ್ಸು ಪೂರ್ಣಗೊಳ್ಳುವವರು, ಕರಡು ಮತದಾರ ಪಟ್ಟಿ ಪ್ರಕಟಣೆ ದಿನಾಂಕದಿಂದ ನಮೂನೆ ೬ ರಲ್ಲಿ ಸೇರ್ಪಡೆಗೊಳಿಸಲು ಅರ್ಜಿ ಸಲ್ಲಿಸಬಹುದಾಗಿದೆ. ಇಂತಹ ಅರ್ಜಿಗಳನ್ನು ಆಯಾ ತ್ರೆöÊಮಾಸಿಕಗಳಲ್ಲಿ ಅರ್ಹತೆಯನ್ನು ಪರಿಶೀಲಿಸಿ ನಿಯಮಾನುಸಾರ ನೊಂದಣಿ ಮಾಡಿಕೊಳ್ಳಲಾಗುವುದು. ಈ ಕುರಿತು ಇಲಾಖಾಧಿಕಾರಿಗಳು ಅರ್ಹರೆಲ್ಲರನ್ನು ನೋಂದಣಿ ಮಾಡಿಸಬೇಕೆಂದರು.
ಜಿಲ್ಲಾಡಳಿತದಿಂದ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೇ ಇರುವ ಅರ್ಹ ನಾಗರಿಕರು ಹಾಗೂ ೧೮ ವರ್ಷ ವಯೋಮಾನದ ಯುವ ಮತದಾರರು ತಮ್ಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ನಮೂನೆ ೬ ರಲ್ಲಿ ಸಂಬಂಧಿಸಿದ ಬಿ.ಎಲ್.ಓಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ . ಈ ಅವಕಾಶವನ್ನು ಜಿಲ್ಲೆಯ ಅರ್ಹ ಯುವಕರು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬಹುದು ಎಂದರು.
ಜಿಲ್ಲಾ ನಗರಾಬಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ ಜೆ.ಸಿ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮೆಹಬೂಬ ತುಂಬರಮಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಐಆರ್ ಅಕ್ಕಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಮುಖ್ಯ ಚುನಾವಣಾ ತರಭೇತುದಾರ ಬಸವರಾಜ ಗಿರಿತಿಮ್ಮಣ್ಣವರ,ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಚಾರ್ಯರು, ಚುನಾವಣಾ ಶಾಖೆಯ ತಹಶೀಲ್ದಾರ , ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠಲ ಜಾಬಗೌಡ್ರ, ಕ್ಷೇತ್ರ ಶಿಕ್ಷಣಾದಿಕಾರಿಗಳು, ಕೌಶಲ್ಯಾಭಿವೃದ್ಧಿ ಅಧಿಕಾರಿ ಮಲ್ಲೂರ ಬಸವರಾಜ ಸೇರಿದಂತೆ ಸ್ವೀಪ್ ಸಮಿತಿ ಸದಸ್ಯರು ಇದ್ದರು.


Leave a Reply