ಬೆಳಗಾವಿ, ಡಿ.೦೮ : ಬೆಳಗಾವಿ ತಾಲೂಕಿನ ಎಂಟನೆಯ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ ೧೨, ಬೆಳಗಾವಿ ತಾಲೂಕಿನ ಅರಳಿ ಕಟ್ಟಿ ಗ್ರಾಮದ ತೋಂಟದಾರ್ಯ ಮಠದ ಆವರಣದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷರಾದ ಸುರೇಶ ಹಂಜಿ ಅವರು ತಿಳಿಸಿದರು.
ನಗರದ ವಾರ್ತಾ ಭವನದಲ್ಲಿ ಗುರುವಾರ (ಡಿ.೮) ನಡೆದ ಪತ್ರಿಕಾಗೋಷ್ಠಿಯಲ್ಲಿ ಡಿ.೧೨ ರಂದು ನಡೆಯಲಿರುವ ಬೆಳಗಾವಿ ತಾಲೂಕಿನ ಎಂಟನೆಯ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯ ಕುರಿತು ಅವರು ಮಾತನಾಡಿದರು.
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬೆಳಗಾವಿ ಜಿಲ್ಲೆಯ ಲೇಖಕಿಯರ ಸಂಘದ ಅಧ್ಯಕ್ಷರಾದಂತ ಆಶಾ ಕಡಪಟ್ಟಿ ರವರನ್ನು ಆಯ್ಕೆ ಮಾಡಲಾಗಿದೆ. ಭುವನೇಶ್ವರಿ ಪೂಜೆ ಹಾಗೂ ಮೆರವಣಿಗೆ ಕಾರ್ಯಕ್ರಮಕ್ಕೆ ಶ್ರೀ ಶಿವಮೂರ್ತಿ ಮಹಾಸ್ವಾಮಿಗಳವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದು ಬಳಿಕ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ಅಧ್ಯಕ್ಷರಾದ ಸುರೇಶ ಹಂಜಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
Gadi Kannadiga > Local News > ಬೆಳಗಾವಿ ತಾಲೂಕಿನ ಎಂಟನೆಯ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ ೧೨ ರಂದು