This is the title of the web page
This is the title of the web page

Please assign a menu to the primary menu location under menu

Local News

ಮಹಾನಗರ ಪಾಲಿಕೆಯ ಮಹಾಪೌರ ಹಾಗೂ ಉಪಮಹಾಪೌರರ ಸ್ಥಾನಗಳಿಗೆ ಚುನಾವಣೆ


ಬೆಳಗಾವಿ, ಜ.೧೯ : ಮಹಾನಗರ ಪಾಲಿಕೆಯ ೨೧ ನೇ ಅವಧಿಗೆ ಮಹಾಪೌರ ಹಾಗೂ ಉಪಮಹಾಪೌರರ ಸ್ಥಾನಗಳಿಗೆ ಚುನಾವಣೆಯನ್ನು ನಿಗದಿಪಡಿಸಲಾಗಿದ್ದು, ಫೆಬ್ರುವರಿ ೬, ೨೦೨೩ ರಂದು ಮಧ್ಯಾಹ್ನ್ಹ ೩ ಗಂಟೆಗೆ ಬೆಳಗಾವಿಯ ಮಹಾನಗರ ಪಾಲಿಕೆ ಸಭಾಗೃಹದಲ್ಲಿ ಚುನಾವಣೆ ನಡೆಯಲಿದೆ.
ಮಹಾಪೌರರ ಸ್ಥಾನವು ಸಾಮಾನ್ಯ ಮಹಿಳೆಯರಿಗೆ ಹಾಗೂ ಉಪಮಹಾಪೌರ ಸ್ಥಾನವು ಹಿಂದುಳಿದ ವರ್ಗ-ಬ ಮಹಿಳೆಯರಿಗೆ ಮೀಸಲಾಗಿದೆ.
ಚುಣಾವಣೆ ವೇಳಾಪಟ್ಟಿ:
ಫೆಬ್ರುವರಿ ೬, ೨೦೨೩ ರಂದು ಮುಂಜಾನೆ ೧೦ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಮಹಾಪೌರ, ಉಪಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ ೩ ಗಂಟೆಗೆ ಸಭೆ ಪ್ರಾರಂಭವಾಗುವುದು.
ಮಧ್ಯಾಹ್ನ ೩ ಗಂಟೆಯ ನಂತರ ಮಹಾಪೌರ, ಉಪಮಹಾಪೌರ ಸ್ಥಾನಕ್ಕೆ ಚುನಾವಣೆ ಪ್ರಾರಂಭವಾಗಲಿದ್ದು, ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ನಡವಳಿಕೆ ಪುಸ್ತಕದಲ್ಲಿ ಸದಸ್ಯರ ಸಹಿ ದಾಖಲಿಸುವುದು, ಹಾಗೂ ಮತಗಳ ಎಣಿಕೆ ಮತ್ತು ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಅಧ್ಯಕ್ಷಾಧಿಕಾರಿಗಳು, ಮಹಾನಗರ ಪಾಲಿಕೆ(ಚುನಾವಣೆ) ಹಾಗೂ ಪ್ರಾದೇಶಿಕ ಆಯುಕ್ತರಾದ ಎಂ.ಜಿ. ಹಿರೇಮಠ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply