This is the title of the web page
This is the title of the web page

Please assign a menu to the primary menu location under menu

Local News

‘ಉದ್ಯಮಿಯಾಗು- ಉದ್ಯೋಗ ನೀಡು’: ಏಪ್ರಿಲ್ ೮ ರಂದು


ಬೆಳಗಾವಿ, ಏ.೦೬ : ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಡಾ. ಮುರುಗೇಶ ಆರ್. ನಿರಾಣಿ ಅವರ ನ್ಭೆತೃತ್ವದಲ್ಲಿ ಏಪ್ರಿಲ್ ೮ ರಂದು ಬೆಳಿಗ್ಗೆ ೯.೩೦ ಗಂಟೆಗೆ ನಗರದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ.ಎ.ಪಿ.ಜೆ. ಅಬ್ದುಲ ಕಲಾಂ ಅಡಿಟೋರಿಯಂನಲ್ಲಿ ‘ಉದ್ಯಮಿಯಾಗು-ಉದ್ಯೋಗ ನೀಡು’ ಕಾರ್ಯಾಗಾರ ನಡೆಯಲಿದೆ.
ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯ ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸಲು ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳು, ಬ್ಯಾಂಕಿನ ಸಾಲ ಸೌಲಭ್ಯಗಳು, ಸರ್ಕಾರದಿಂದ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ್ಲ ಜಿಲ್ಲೆಯ ಮತ್ತು ರಾಜ್ಯದ ಯಶಸ್ವಿ ಉದ್ದಿಮೆದಾರರು ತಮ್ಮ ಅನುಭವವನ್ನು ಹಂಚಿಕೊಳ್ಳಲಿದ್ದಾರೆ.
ಮಧ್ಯಾಹ್ನದ ಕೈಗಾರಿಕಾ ಅದಾಲತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳು ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಸೂಕ್ತ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಅಂತಿಮ ವರ್ಷದ ಪದವೀಧರ ವಿದ್ಯಾರ್ಥಿಗಳು , ಐ.ಟಿ.ಆಯ್. ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಹಾಗೂ ಭಾವೀ ಕೈಗಾರಿಕೋದ್ಯಮಿಗಳು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply