ಕೊಪ್ಪಳ ಏಪ್ರಿಲ್ ೨೦ : ೨೦೨೩-೨೪ನೇ ಸಾಲಿನ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ವಿವಿಧ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮಕ್ಕಳ ಹೆಸರು ನೋಂದಾಯಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪದ್ಮಾವತಿ ಜಿ ಅವರು ತಿಳಿಸಿದ್ದಾರೆ.
ಬಾಲಭವನ ಸೊಸೈಟಿ, ಬೆಂಗಳೂರು ಇವರು ವತಿಯಿಂದ ಜಿಲ್ಲಾ ಮಟ್ಟದ ಬೇಸಿಗೆ ಶಿಬಿರ ಆಯೋಜಿಸಿದ್ದು, ಶಿಬಿರವು ೧೫ ದಿನಗಳ ಕಾಲ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೪ರವರೆಗೆ ನಡೆಯಲಿದೆ. ಶಿಬಿರದಲ್ಲಿ ವಿವಿಧ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ, ಕಸದಿಂದ ರಸ, ಸಮೂಹ ನೃತ್ಯ, ಸಮೂಹ ಗೀತೆ, ಕರಾಟೆ, ಯೋಗ, ಇತರೆ ಚಟುವಟಿಕೆಗಳು ನಡೆಯಲಿವೆ. ಈ ಕಾರ್ಯಕ್ರಮಕ್ಕೆ ೦೫ ರಿಂದ ೧೬ ವರ್ಷದ ಒಳಗಿನ ಆಸಕ್ತಿಯುಳ್ಳ ಸರಕಾರಿ ಶಾಲೆ ಅಥವಾ ಸೌಲಭ್ಯ ವಂಚಿತ ಮಕ್ಕಳು ಚಟುವಟಿಕೆಯಲ್ಲಿ ಭಾಗವಹಿಸಲು ಮೇ ೦೧ರ ಸಂಜೆ ೫.೩೦ ಗಂಟೆಯೊಳಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆಡಳಿತ ಭವನ ಕೊಪ್ಪಳ ಇವರಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಚಟುವಟಿಕೆಯಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ, ದೂರವಾಣಿ ಸಂಖ್ಯೆ ೦೮೫೩೯-೨೨೨೭೦೩ ಹಾಗೂ ಮೊ.ಸಂ: ೯೯೭೨೯೪೪೪೬೭ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Gadi Kannadiga > State > ಬೇಸಿಗೆ ಶಿಬಿರದಡಿ ಮಕ್ಕಳಿಗೆ ವಿವಿಧ ಸೃಜನಾತ್ಮಕ, ಕ್ರಿಯಾತ್ಮಕ ಚಟುವಟಿಕೆ: ಹೆಸರು ನೋಂದಾಯಿಸಿ
ಬೇಸಿಗೆ ಶಿಬಿರದಡಿ ಮಕ್ಕಳಿಗೆ ವಿವಿಧ ಸೃಜನಾತ್ಮಕ, ಕ್ರಿಯಾತ್ಮಕ ಚಟುವಟಿಕೆ: ಹೆಸರು ನೋಂದಾಯಿಸಿ
Suresh20/04/2023
posted on
More important news
ಬೀಟ್ ಮೀಟಿಂಗ್
29/05/2023
ಸಚಿವ ಎಚ್.ಕೆ.ಪಾಟೀಲ ಅವರ ಜಿಲ್ಲಾ ಪ್ರವಾಸ
29/05/2023
ಶ್ರೀ ಯಾಜ್ಞವಲ್ಕö್ಯ ಗುರುಗಳ ಜಯಂತಿ
29/05/2023
ಅಧಿಕಾರ ಸ್ವೀಕಾರ
29/05/2023