This is the title of the web page
This is the title of the web page

Please assign a menu to the primary menu location under menu

Local News

ಬಿಜೆಪಿಯಿಂದ ಪರಿಸರ ಜಾಗೃತಿ ಅಭಿಯಾನ


ಬೆಳಗಾವಿ: ಭಾರತೀಯ ಜನತಾ ಪಾರ್ಟಿಯ ರೈತ ಮೋರ್ಚಾ ಹಾಗೂ ಯುವ ಮೋರ್ಚಾದಿಂದ ಬೆಳಗಾವಿಯ ದಕ್ಷಿಣ ಮತಕ್ಷೇತ್ರದ ಶ್ರೀ ಕಲ್ಮೇಶ್ವರ ದೇವಸ್ಥಾನದಲ್ಲಿ ಡಾ. ಶ್ಯಾಮಪ್ರಸಾದ ಮುಖರ್ಜಿಯವರ ಸ್ಮರಣಾರ್ಥ ನಡೆಯುತ್ತಿರುವ ಪರಿಸರ ಜಾಗೃತಿ ಅಭಿಯಾನದ ಅಂಗವಾಗಿ ಬೀಜದ ಉಂಡೆಗಳನ್ನು ತಯಾರಿಸಿ, ಸಸಿ ನೆಡುವ ಕಾರ್ಯಕ್ರಮ ನೆರವೇರಿಸಿದರು.

ಅಂದು ಡಾ. ಶ್ಯಾಮಪ್ರಸಾದ ಜೀ ನೆಟ್ಟ ಜನಸಂಘವೆಂಬ ಬೀಜ ಇಂದು ಹೆಮ್ಮರವಾಗಿ ಬೆಳೆದು ಈ ದೇಶದ ಜನಸೇವೆಯ ಅಧಿಕಾರದ ಚುಕ್ಕಾಣಿ ಹಿಡಿದು, ವಿಶ್ವದ ಅತೀ ದೊಡ್ಡ ರಾಜಕೀಯ ಸಂಘಟನೆಯಾಗಿ ಬೆಳೆದು ನಿಂತಿದೆ.

ಅಂತಹ ಸರ್ವ ಸ್ಪರ್ಶಿ, ಸರ್ವ ವ್ಯಾಪ್ತಿ ಸಂಘಟನೆ ಕಟ್ಟಿದ ಮಹನೀಯರ ಸ್ಮರಣಾರ್ಥ ಭಾಜಪಾ ನಡೆಯುತ್ತಿರುವ ಪರಿಸರ ಜಾಗೃತಿ ಅಭಿಯಾನದ ಭಾಗವಿದು. ಡಾ ಶ್ಯಾಮ ಪ್ರಸಾದರ ಕನಸಿನಂತೆ ಸದೃಢ ಸಶಕ್ತ ರಾಷ್ಟ್ರ ನಿರ್ಮಾಣದ ಜೊತೆ ಅವರ ನೆನಪನ್ನು ಪರಿಸರ ಸಂರಕ್ಷಣೆಯ ಜವಾಬ್ದಾರಿ ನಿಭಾಯಿಸುತ್ತ ನಮ್ಮ ಕಾರ್ಯಕರ್ತರು ಯಶಸ್ವಿಗೊಳಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಭಾಜಪಾ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿಯವರು, ಬೆಳಗಾವಿ ವಿಭಾಗ ಸಹ ಪ್ರಭಾರಿಗಳಾದ ಬಸವರಾಜ ಯಂಕಂಚಿಯವರು, ಬೆಳಗಾವಿ ವಿಭಾಗದ ಸಹ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ, ಅಭಿಯಾನದ ಜಿಲ್ಲಾ ಸಂಚಾಲಕ ಮಹಾಂತೇಶ ವಕ್ಕುಂದ, ಬೆಳಗಾವಿ ದಕ್ಷಿಣ ಮಂಡಲದ ಅಧ್ಯಕ್ಷೆ ಗೀತಾ ಸುತಾರ, ರೈತ ಮೋರ್ಚಾದ ಅಧ್ಯಕ್ಷ ಕಲ್ಲಪ್ಪ ಶಹಾಪುರಕರ, ರೈತ ಮೋರ್ಚಾದ ದಕ್ಷಿಣ ಮಂಡಲದ ಅಧ್ಯಕ್ಷ ಸತೀಶ ಖನ್ನೂಕರ, ಪಕ್ಷದ ಹಿರಿಯ ಪದಾಧಿಕಾರಿಗಳು, ಕಾರ್ಯಕರ್ತರ ಜೊತೆ ಯುವ ಮೋರ್ಚಾ ಜಿಲ್ಲಾಧ್ಯಕ್ಷರು, ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು, ರೈತ ಮೋರ್ಚಾ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.


Gadi Kannadiga

Leave a Reply