ಗದಗ ಅಗಸ್ಟ ೩೦: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಳು ಸೆಪ್ಟೆಂಬರ್ ೩ ರಂದು ಜರುಗಲಿವೆ. ಸದರಿ ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ ೧೯ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ಪರಿಮಿತಿಯೊಳಗೆ ಸೆಪ್ಟೆಂಬರ್ ೩ ರಂದು ಬೆಳಿಗ್ಗೆ ೮ ರಿಂದ ಸಂಜೆ ೫ ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕರ‍್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಿದೆ.ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್,ಕೈಗಡಿಯಾರ, ಕ್ಯಾಲ್ಕುಲೇಟರ್, ಬ್ಲೂಟೂಥ ಹಾಗೂ ಇತರ ಎಲೆಕ್ಟ್ರಾನಿಕ್ಸ್ ಉಪಕರಣಗಳು, ಲಾಂಗ್ ಟೇಬಲ್, ಬಿಳಿ ಬ್ಲೂಯಡ್, ಬೆಂಕಿ ಪೊಟ್ಟಣ ಅಥವಾ ಸಿಗರೇಟು ಲೈಟರ್ ಮತ್ತು ಇತರೆ ಸಂಪರ್ಕ ಸಲಕರಣಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ವೈಶಾಲಿ ಎಂ.ಎಲ್. ತಿಳಿಸಿದ್ದಾರೆ.
Gadi Kannadiga > State > ಪ್ರತಿಬಂಧಕಾಜ್ಞೆ ಜಾರಿ
ಪ್ರತಿಬಂಧಕಾಜ್ಞೆ ಜಾರಿ
Suresh30/08/2023
posted on
More important news
ಬೆಳಗಾವಿಯ ಹುಡುಗರ ಸಾಹಸ ” ಪರ್ಯಾಯ”
18/09/2023