This is the title of the web page
This is the title of the web page

Please assign a menu to the primary menu location under menu

State

ಕನ್ನಡ ಪುಸ್ತಕಗಳ ಪ್ರದರ್ಶನ


ಗದಗ ನವೆಂಬರ್ ೧೫: ೨೦೨೦ ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಮತ್ತು ೨೦೨೨ ರಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಏಕಗವಾಕ್ಷಿ ಮತ್ತು ಎಸ್.ಸಿ.ಪಿ./ ಟಿ.ಎಸ್.ಪಿ. ಯೋಜನೆಯಡಿಯಲ್ಲಿ ರಾಜ್ಯ ಮಟ್ಟದ ಪುಸ್ತಕ ಅಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳನ್ನು ಆಯ್ಕೆ ಸಮಿತಿ ಮುಂದೆ ಮಂಡಿಸಲಾಗಿತ್ತು. ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು , ಆಯ್ಕೆಯಾದ ಮತ್ತು ಆಯ್ಕೆಯಾಗದ ಕನ್ನಡ ಪುಸ್ತಕಗಳ ಪ್ರದರ್ಶನವನ್ನು ನವೆಂಬರ್ ೨೨ ರಿಂದ ೨೪ ರವರೆಗೆ ಗ್ರಂಥಾಗಣ, ನಗರ ಕೇಂದ್ರ ಗ್ರಂಥಾಲಯ, ಪಶ್ಚಿಮ ವಲಯ, ಹಂಪಿನಗರ , ಬೆಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು , ವಿತರಕು, ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ ೩೦ ರೊಳಗಾಗಿ ನಿರ್ದೇಶಕರು , ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ೪ ನೇ ಮಹಡಿ, ಡಾ. ಅಂಬೇಡ್ಕರ್ ಬೀದಿ ಬೆಂಗಳೂರು ಇಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಾಲಯಾಧಿಕಾರಿ, ನಗರ/ ಜಿಲ್ಲಾ ಕೇಂದ್ರ ಗ್ರಂಥಾಲಯ, ಕೆ.ಎಚ್.ಪಾಟೀಲ ಕ್ರೀಡಾಂಗಣ ಗ್ರಂಥಾಲಯ , ರೆಡ್ಡಿ ಕಾಲೇಜು, ಗದಗ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಪ್ರಕಟಣೆ ತಿಳಿಸಿದೆ.


Gadi Kannadiga

Leave a Reply