This is the title of the web page
This is the title of the web page

Please assign a menu to the primary menu location under menu

Local News

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಅರ್ಜಿ ದಿನಾಂಕ ವಿಸ್ತರಣೆ


ಬೆಳಗಾವಿ, ಡಿ.೦೯ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ (sಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ಡಿಸೆಂಬರ್ ೧೯ ರವರೆಗೆ ವಿಸ್ತರಿಸಲಾಗಿದೆ.
ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ೨೦೨೨-೨೩ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ವಿದ್ಯಾರ್ಥಿಯ ಪೋಷಕರ ಆದಾಯ ಮಿತಿ: ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ ರೂ. ೨.೫೦ ಲಕ್ಷ ಹಾಗೂ ಪ್ರವರ್ಗ-೨ಎ, ೨ಬಿ, ೩ಎ, ೩ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. ೧ ಲಕ್ಷ ಮಿರಿರಬಾರದು.
ಇಲಾಖೆಯ ವೆಬ್‌ಸೈಟ್ hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜ.hosಣeಟ[email protected] ಞಚಿಡಿಟಿಚಿಣಚಿಞಚಿ .gov.iಟಿ ಗೆ ಇ-ಮೇಲ್ ಮುಖಾಂತರ ಸಂಪರ್ಕಿಸಬಹುದು ಎಂದು ಬೆಳಗಾವಿ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply