ಕೊಪ್ಪಳ ಜನವರಿ ೦೬ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ೨೦೨೨-೨೩ನೇ ಸಾಲಿಗೆ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಜನವರಿ ೨೦ ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-೧, ಎಸ್.ಸಿ. & ಎಸ್.ಟಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ. ೨.೫೦ ಲಕ್ಷ ಮತ್ತು ಪ್ರವರ್ಗ-೨ಎ, ೨ಬಿ, ೩ಎ, ೩ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತg ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ. ೧ ಲಕ್ಷದೊಳಗಿರಬೇಕು. ಅರ್ಜಿ ಸಲ್ಲಿಸಲು ಇಲಾಖಾ ವೆಬ್‌ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಜನವರಿ ೨೦ ಕೊನೆಯ ದಿನವಾಗಿದ್ದು, ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ಅನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bಛಿತಿಜ.hosಣeಟ[email protected]ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಅಥವಾ ಜಿಲ್ಲಾ/ ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು ಅಥವಾ ಸಹಾಯವಾಣಿ ಸಂಖ್ಯೆ ೦೮೦-೮೦೫೦೩೭೦೦೦೬ ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ : ಅವಧಿ ವಿಸ್ತರಣೆ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023