This is the title of the web page
This is the title of the web page

Please assign a menu to the primary menu location under menu

State

ತೋಟಗಾರಿಕೆ ತರಬೇತಿಗಾಗಿ ಅರ್ಜಿ: ಅವಧಿ ವಿಸ್ತರಣೆ


ಕೊಪ್ಪಳ ಮೇ ೧೬ : ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ೨೦೨೩-೨೪ನೇ ಸಾಲಿಗೆ ಜಿಲ್ಲೆಯ ಆಸಕ್ತ ಅರ್ಹ ರೈತ ಮಕ್ಕಳಿಂದ ತಾಲೂಕಿನ ಮುನಿರಾಬಾದಿನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಜೂನ್ ೦೨ ರಿಂದ ೨೦೨೪ರ ಮಾಚ ೩೧ ರವರೆಗೆ ನಡೆಯುವ ೧೦ ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಮೇ ೨೨ರವರಗೆ ವಿಸ್ತರಣೆ ಮಾಡಲಾಗಿದೆ.
೧೦ ತಿಂಗಳ ತೋಟಗಾರಿಕೆ ತರಬೇತಿಗಾಗಿ ಸಾಮಾನ್ಯ ಅಭ್ಯರ್ಥಿ-೧೭, ಪರಿಶಿಷ್ಠ ಜಾತಿ-೦೩ ರಂತೆ ಒಟ್ಟು ೨೦ ಅಭ್ಯರ್ಥಿಗಳ ಗುರಿ ನಿಗದಿ ಪಡಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ಕನಿಷ್ಠ ೧೮ ವರ್ಷ ಗರಿಷ್ಠ ೩೩ ವರ್ಷ ಹಾಗೂ ಇತರರಿಗೆ ಕನಿಷ್ಠ ೧೮ ವರ್ಷ ಗರಿಷ್ಠ ೩೦ ವರ್ಷ ವಯೋಮಿತಿಯಲ್ಲಿರಬೇಕು. ವಿದ್ಯಾರ್ಹತೆಯು ಕನ್ನಡ ವಿಷಯಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಅಭ್ಯರ್ಥಿಯು ಚೆನ್ನಾಗಿ ಕನ್ನಡ ಓದುವುದು, ಬರೆಯುವುದು ಮತ್ತು ಮಾತನಾಡುವುದನ್ನು ಬಲ್ಲವರಾಗಿರಬೇಕು. ಈ ತರಬೇತಿಯು ರೈತರ ಮಕ್ಕಳಿಗಾಗಿರುವುದರಿಂದ ಅಭ್ಯರ್ಥಿಯು ತಂದೆ, ತಾಯಿ ಅಥವಾ ಪೋಷಕರು (ತಂದೆ/ತಾಯಿ ಇಲ್ಲದ ಪಕ್ಷದಲ್ಲಿ) ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ತೋಟದ ಕೆಲಸಗಳನ್ನು ಮಾಡುವಷ್ಟು ದೃಢಕಾಯರಾಗಿರಬೇಕು.
ಅರ್ಜಿಶುಲ್ಕವು ಸಾಮಾನ್ಯ ಆಭ್ಯರ್ಥಿಗಳಿಗೆ ರೂ. ೩೦, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ರೂ. ೧೫ ಆಗಿದ್ದು, ಫೋಸ್ಟಲ್ ಆರ್ಡರ್(ಐಪಿಓ) ಅಥವಾ ಡಿಮ್ಯಾಂಡ್ ಡ್ರಾಫ್ಟ್ (ಡಿಡಿ)ನ್ನು ತೋಟಗಾರಿಕೆ ಉಪನಿರ್ದೇಶಕರು(ಜಿ.ಪಂ) ಕೊಪ್ಪಳ ರವರ ಹೆಸರಿನಲ್ಲಿ ಪಡೆದು ಅರ್ಜಿ ಜೊತೆಗೆ ಲಗತ್ತಿಸಬೇಕು.
ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ತೋಟಗಾರಿಕೆ ಉಪನಿರ್ದೇಶಕರು(ಜಿ.ಪಂ) ಕೊಪ್ಪಳ ಅಥವಾ ಸಹಾಯಕ ತೋಟಗಾರಿಕೆ ನಿರ್ದೇಕರು (ರಾವ) ಕೊಪ್ಪಳ ರವರ ಕಚೇರಿಯಲ್ಲಿ ಅಥವಾ ಇಲಾಖಾ ವೆಬ್ ಸೈಟ್ ತಿತಿತಿ.hoಡಿಣiಛಿuಟಣuಡಿe.ಞಚಿಡಿ.ಟಿiಛಿ.iಟಿ ಮುಖಾಂತರ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರಸ್ತುತ ಅರ್ಜಿ ಸಲ್ಲಿಸಲು ಮೇ ೨೨ ಕೊನೆಯದಿನವಾಗಿದ್ದು, ಅಂದು ಸಂಜೆ ೫.೩೦ ರೊಳಗಾಗಿ ಅರ್ಜಿಯನ್ನು ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಕೊಪ್ಪಳ ಅಥವಾ ಸಹಾಯಕ ತೋಟಗಾರಿಕೆ ನಿರ್ದೇಕರು (ರಾವ) ಕೊಪ್ಪಳ ರವರ ಕಛೇರಿಯಲ್ಲಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗಾಗಿ ಮೇ ೨೫ರಂದು ಬೆಳಿಗ್ಗೆ ೧೦ ಗಂಟೆಗೆ ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನ ಏರ್ಪಡಿಸಲಾಗಿದ್ದು, ಅಭ್ಯರ್ಥಿಗಳು ಈ ಸಂದರ್ಶನಕ್ಕೆ ಎಲ್ಲಾ ಮೂಲ ದಾಖಾಲಾತಿಗಳೊಂದಿಗೆ ಹಾಜರಾಗಬೇಕು. ಇದಕ್ಕಾಗಿ ಪ್ರತ್ಯೇಕ ಸಂದರ್ಶನ ಪತ್ರವನ್ನು ಕಳುಹಿಸಲಾಗುವುದಿಲ್ಲ ಎಂದು ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕರಾದ ಕೃಷ್ಣ ಉಕ್ಕುಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply