ಕೊಪ್ಪಳ, ಅಕ್ಟೋಬರ್ ೧೭ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ೨೦೨೨-೨೩ನೇ ಸಾಲಿನಲ್ಲಿ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಆಸಕ್ತ ಕಲಾತಂಡಗಳು ಅಕ್ಟೋಬರ್ ೧೯ ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ: ೯೪೮೦೮೪೧೨೪೫ ಹಾಗೂ ೯೩೮೦೭೫೩೨೨೪ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಬಿ. ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ : ಅವಧಿ ವಿಸ್ತರಣೆ