This is the title of the web page
This is the title of the web page

Please assign a menu to the primary menu location under menu

Local News

ಐಟಿಐ ವಿದ್ಯಾರ್ಥಿಗಳಿಗೆ ಅಪ್ರೆಂಟಿಶಿಪ್: ಅರ್ಜಿ ದಿನಾಂಕ ವಿಸ್ತರಣೆ


ಬೆಳಗಾವಿ,ಏ.೨೬: ತಾಂತ್ರಿಕ ತರಬೇತಿ ಸಂಸ್ಥೆ (ಟಿ.ಟಿ.ಐ.) ಹಾಗೂ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರು ಇವರು ‘ಅಪ್ರೆಂಟಿಶಿಪ್ ಕಾಯ್ದೆ ೧೯೬೧’ರ ಅಡಿಯಲ್ಲಿ,“ಐಟಿಐ (ಫಿಟ್ಟರ್, ಟರ್ನರ್, ಮಷಿನಿಸ್ಟ್, ಶೀಟ್ ಮೆಟಲ್ ವರ್ಕರ್, ಫೌಂಡ್ರಿಮ್ಯಾನ್, ಎಲೆಕ್ಟ್ರಿಷಿಯನ್, ವೆಲ್ಡರ್, ಕೋಪಾ)” ಟ್ರೇಡ್‌ಗಳನ್ನು ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ಶಿಶಿಕ್ಷÄ ತರಬೇತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಏಪ್ರಿಲ್ ೨೮ ೨೦೨೨ರೊಳಗೆ ಅರ್ಜಿ ಸಲ್ಲಿಸಲು ಗಡುವು ನೀಡಲಾಗಿತ್ತು. ಈಗ ಕೊನೆ ದಿನಾಂಕವನ್ನು ಮೇ ೫ ೨೦೨೨ರ ವರೆಗೆ ವಿಸ್ತರಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಕೊಠಡಿ ಸಂಖ್ಯೆ: ಟಿಪಿ೨ & ಟಿಪಿ೩, ತಳಮಹಡಿ, ಸುವರ್ಣ ವಿಧಾನಸೌಧ, ಬೆಳಗಾವಿ ಇಲ್ಲಿ ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply