This is the title of the web page
This is the title of the web page

Please assign a menu to the primary menu location under menu

State

ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ : ಅವಧಿ ವಿಸ್ತರಣೆ


ಕೊಪ್ಪಳ ಜನವರಿ ೧೦ : ಸಮಾಜ ಕಲ್ಯಾಣ ಇಲಾಖೆಯಿಂದ ೨೦೨೨ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
೨೦೨೨ನೇ ಶೈಕ್ಷಣಿಕ ಸಾಲಿನಲ್ಲಿ ಉತ್ತೀರ್ಣರಾದ ದ್ವಿತೀಯ ಪಿ.ಯು.ಸಿ, ೩ ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್, ಇಂಜಿನೀಯರಿಂಗ್ ಅಥವಾ ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಸಲು ವಿದ್ಯಾರ್ಥಿಗಳಿಗೆ ಫೆಬ್ರವರು ೨೮ ರವರೆಗೆ ಆನ್-ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಪರಿಶಿಷ್ಟ ಜಾತಿಯ ಇಲಾಖಾ ವೆಬ್‌ಸೈಟ್ ಆದ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಹಾಗೂ ಪರಿಶಿಷ್ಟ ವರ್ಗದ ಇಲಾಖಾ ವೆಬ್‌ಸೈಟ್ ಆದ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು ಹಾಗೂ ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಮ್ಯಾನುವಲ್‌ನ ಯಾವುದೇ ಅರ್ಜಿ ಅಥವಾ ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ತಾಲ್ಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳು, ಗಂಗಾವತಿ ಅಥವಾ ಕುಷ್ಟಗಿ ರವರನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply