This is the title of the web page
This is the title of the web page

Please assign a menu to the primary menu location under menu

Local News

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಅರ್ಜಿ ಅವಧಿ ವಿಸ್ತರಣೆ


ಬೆಳಗಾವಿ,ಮೇ.೦೫: ೨೦೨೧-೨೨ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಏಪ್ರಿಲ್ ೩೦ ಕೊನೆಯ ದಿನಾಂಕವಾಗಿ ನಿಗದಿಪಡಿಸಲಾಗಿತ್ತು. ಆದರೆ ಮೆಡಿಕಲ್ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಮೆಡಿಕಲ್ ಕೋರ್ಸ್ಗಳಿಗೆ ಮಾತ್ರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ ೩೧ರ ವರೆಗೆ ವಿಸ್ತರಿಸಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹ, ಸಲ್ಲಿಸಬೇಕಾದ ದಾಖಲಾತಿಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ: ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೪ ಇ-ಮೇಲ್: bಛಿತಿ.sಛಿhoಟಚಿಡಿshiಠಿ@ಞಚಿಡಿಟಿಚಿಣಚಿಞಚಿ.gov.iಟಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ ೦೮೦-೩೫೨೫೪೭೫೭ ಇ-ಮೇಲ್: ಠಿosಣmeಣಡಿiಛಿheಟಠಿಜesಞ@ಞಚಿಡಿಟಿಚಿಣಚಿಞಚಿ.gov.iಟಿ ವಿಳಾಸ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply