This is the title of the web page
This is the title of the web page

Please assign a menu to the primary menu location under menu

State

ಸಮವಸ್ತ್ರ ಸೇವೆಗೆ ಸೇರುವವರಿಗೆ ತರಬೇತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಕೊಪ್ಪಳ ಫೆಬ್ರವರಿ ೧೩ : ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯಿಂದ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಡ ಪಂಗಡದ ಅಭ್ಯರ್ಥಿಗಳಿಗೆ ಪೂರ್ವ ಸಿದ್ಧತೆಗಾಗಿ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಫೆಬ್ರವರಿ ೧೫ ರವರಿಗೆ ಅವಕಾಶವನ್ನು ಕಲ್ಪಿಸಲಾಗಿದೆ.
ಭಾರತೀಯ ಸೇನೆ, ಭದ್ರತಾಪಡೆ ಅಗ್ನಿ ವೀರ್, ಪೊಲೀಸ್ ಪಡೆ ಮೊದಲಾದ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಡ ಪಂಗಡದ ಅಭ್ಯರ್ಥಿಗಳಿಗೆ ೨೦೨೨-೨೩ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲಾಗುತ್ತಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖೆ ವೆಬ್‌ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು.
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕನಿಷ್ಠ ೧೦ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯಸ್ಸು ೧೮ ರಿಂದ ೨೫ ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ ಹಾಗೂ ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕುಷ್ಟಗಿ, ಗಂಗಾವತಿ ರವರನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply