This is the title of the web page
This is the title of the web page

Please assign a menu to the primary menu location under menu

Local News

ಕಬ್ಬಿನ ಬಾಕಿ ಮೊತ್ತ ಪಾವತಿ: ಜೂ.೨೩ ರಂದು ಕಾರ್ಖಾನೆಗಳ ವಿಚಾರಣೆ


ಬೆಳಗಾವಿ,ಜೂನ್೨೧: ೨೦೧೭-೧೮ನೇ ಸಾಲಿನ ಬೆಳಗಾವಿ ಜಿಲ್ಲೆಯ ರೈತರು ವಿವಿಧ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕಬ್ಬು ಬಿಲ್ಲು ಬಾಕಿ ಪಾವತಿಸಿಲ್ಲವೆಂದು ಸಲ್ಲಿಸಿರುವ ದೂರು ಅರ್ಜಿಗಳ ಸಂಬಂಧ ೨೨.೦೬.೨೦೨೨ ರಂದು ವಿಚಾರಣೆ ನಡೆಸಲು ನೋಟಿಸುಗಳನ್ನು ಜಾರಿಗೊಳಿಸಲಾಗಿತ್ತು. ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಉಸ್ತುವಾರಿಗಾಗಿ ರಚಿಸಲಾಗಿರುವ ಸಚಿವ ಸಂಪುಟ ಉಪ ಸಮಿತಿ ಸಭೆಯನ್ನು ಭಾರಿ ಮತ್ತು ಮದ್ಯಮ ನೀರಾವರಿ ಸಚಿವರ ಅಧ್ಯಕ್ಷತೆಯಲ್ಲಿ ತುರ್ತಾಗಿ ನಿಗದಿಗೊಳಿಸಿದ ಹಿನ್ನೆಲೆಯಲ್ಲಿ ೨೨.೦೬.೨೦೨೨ ರಂದು ಆಯುಕ್ತರು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಿಗದಿಯಾಗಿದ್ದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿರುವುದಿಲ್ಲ. ಆದುದರಿಂದ ೨೨.೦೬.೨೦೨೨ ರಂದು ನಿಗದಿಗೊಳಿಸಿದ ವಿಚಾರಣೆಯನ್ನು ಮುಂದೂಡಲಾಗಿದ್ದು, ಮುಂದಿನ ವಿಚಾರಣೆಯ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಆಯುಕ್ತರು, ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು, ಬೆಳಗಾವಿ ಇವರು ತಿಳಿಸಿರುತ್ತಾರೆ. ಅದರಂತೆ ೨೩.೦೬.೨೦೨೨ ರಂದು ನಿಗದಿಯಾಗಿದ್ದ ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳವಿಚಾರಣೆಯನ್ನು ಕೂಡ ಮುಂದುಡಲಾಗಿದೆ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶಕರು, ಆಯುಕ್ತರು ಕೇಂದ್ರ ಸ್ಥಾನಿಕ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply