ಕೊಪ್ಪಳ ಡಿಸೆಂಬರ್ ೦೭ : ೨೦೨೦-೨೧ನೇ ಸಾಲಿನ ಫಸಲ್ ಬಿಮಾ ಯೋಜನೆಯಡಿ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ ೨೦೨೦-೨೧ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಬೆಳೆ ವಿಮೆ ನೋಂದಾಯಿತ ಅರ್ಜಿಯೊಂದಿಗೆ ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಸಂಬಂಧಪಟ್ಟ ತಾಲ್ಲೂಕು (ಕೃಷಿ, ತೋಟಗಾರಿಕೆ, ಬ್ಯಾಂಕ್) ಮಟ್ಟದ ಅಧಿಕಾರಿಗಳಿಗೆ ಪರಿಶೀಲಿಸಲು ಸಂರಕ್ಷಣೆ ತಂತ್ರಾಂಶದ ಮೂಲಕ ಕಳುಹಿಸಲಾಗಿತ್ತು. ತಾಲ್ಲೂಕು ಮಟ್ಟದ ಅಧಿಕಾರಿಗಳು ಪ್ರಸ್ತಾವನೆಗಳನ್ನು ಪರಿಶೀಲಿಸಿ ಸಂಬಂಧಪಟ್ಟ ವಿಮಾ ಸಂಸ್ಥೆಯವರಿಗೆ ವರ್ಗಾಯಿಸಿ, ಅಂತಿಮವಾಗಿ ವಿಮಾ ಸಂಸ್ಥೆಯವರು ಪ್ರಸ್ತಾವನೆಗಳನ್ನು ಒಪ್ಪಿಗೆ ಅಥವಾ ತಿರಸ್ಕೃತ ಮಾಡಿರುತ್ತಾರೆ.
ವಿಮಾ ಸಂಸ್ಥೆಯವರಿಂದ ತಿರಸ್ಕೃತಗೊಂಡಿರುವ ಪ್ರಸ್ತಾವನೆಗಳ ಕುರಿತು ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರಗಳಿಗೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ. ಈ ಕುರಿತು ರೈತರು ಡಿಸೆಂಬರ್ ೨೦ ರೊಳಗಾಗಿ ತಮ್ಮ ಆಕ್ಷೇಪಣೆಯನ್ನು ರೈತ ಸಂಪಂರ್ಕ ಕೇಂದ್ರಗಳಿಗೆ ಅಥವಾ ಸಹಾಯಕ ಕೃಷಿ ನಿರ್ದೇಶಕರು, ಕೊಪ್ಪಳ ಕಛೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪಂರ್ಕ ಕೇಂದ್ರಗಳಿಗೆ ಅಥವಾ ಸಹಾಯಕ ಕೃಷಿ ನಿರ್ದೇಶಕರು, ಕೊಪ್ಪಳ, ಇಲ್ಲಿಗೆ ಸಂಪರ್ಕಿಸುಂತೆ ಪ್ರಕಟಣೆ ತಿಳಿಸಿದೆ.
Gadi Kannadiga > State > ಫಸಲ್ ಬಿಮಾ ಯೋಜನೆ: ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023