This is the title of the web page
This is the title of the web page

Please assign a menu to the primary menu location under menu

Local News

ಕೊನೆಗೂ ಕ್ಯಾಮರಾ ಕಣ್ಣಿಗೆ ಬಿದ್ದ ಚಿರತೆ


ಬೆಳಗಾವಿ: ಬೆಳಗಾವಿ ಜನತೆ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದೆರೆಡು ದಿನಗಳಿಂದ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದ್ದು ಇದೀಗ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದೆ.

ಚಿರತೆ ಚಲನವಲನ ತಿಳಿಯಲು ಅರಣ್ಯ ಇಲಾಖೆ ಸಿಬ್ಬಂದಿ ಗಿಡಗಳಿಗೆ ಕ್ಯಾಮರಾ ಅಳವಡಿಸಿದ್ದರು. ಗಾಲ್ಫ್ ಮೈದಾನದಲ್ಲಿ ಅಳವಡಿಸಿದ ಕ್ಯಾಮರಾದಲ್ಲಿ ಚಿರತೆ ಸೆರೆಯಾಗಿದ್ದು ಸೆರೆಹಿಡಿಯಲು ಅರಣ್ಯ ಇಲಾಖೆ ಸಿದ್ದತೆ ನಡೆಸಿದೆ.

ಚಿರತೆ ಬೆಳಗಾವಿ ಗಾಲ್ಪ ಮೈದಾನದಲ್ಲಿ ಇರುವುದರಿಂದ ಮುಂಜಾಗ್ರತೆ ಕ್ರಮವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ವಿಶ್ವೇಶ್ವರ ನಗರ ಸಹ್ಯಾದ್ರಿ ನಗರ,ದೂರದರ್ಶನ ಕೇಂದ್ರ, ಕ್ಯಾಂಪ್ ಪ್ರದೇಶ ಹಿಂಡಲಗಾ ,ವಿಜಯನಗರ ಸೇರಿದಂತೆ 22 ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಅದರೆ ನಗರದಲ್ಲಿ ಇಂದು ಭಾರಿ ಮಳೆಯಾಗುತ್ತಿರುವುದರಿಂದ ಎಲ್ಲ ಶಾಲೆಗಳಿಗೂ ರಜೆ ಘೋಷಣೆ ಮಾಡಲಾಗಿದೆ.

ಚಿರತೆಗಾಗಿ ಗಾಲ್ಪ್ ಮೈದಾನದಲ್ಲಿ 7 ಬೋನು ಇರಿಸಲಾಗಿದ್ದು, 16 ಟ್ರ್ಯಾಪ್ ಕ್ಯಾಮರಾ ಅಳವಡಿಸಿ ಶೋಧ ಕಾರ್ಯಾಚರಣೆ ಮಾಡಲಾಗುತ್ತದೆ


Gadi Kannadiga

Leave a Reply