This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿ : ದೇವಸ್ಥಾನದ ಜಮೀನು ವಿಚಾರವಾಗಿ ಕೊಲೆ : ವಾಹನಗಳಿಗೆ ಬೆಂಕಿ, ಹಿಂಸಾಚಾರ


ಬೆಳಗಾವಿ: ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿದ ಜಗಳ ಶನಿವಾರ ಕಾರು ಪಾರ್ಕಿಂಗ್ ಮಾಡುವ ವಿಷಯಕ್ಕೆ ಗಲಾಟೆಯಾಗಿ ವ್ಯಕ್ತಿಯನ್ನು ಕೊಲೆ ಮಾಡಲಾದ ಘಟನೆ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ನಡೆದಿದೆ.

ವ್ಯಕ್ತಿಯ ಕೊಲೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಸಿಕ್ಕ ಸಿಕ್ಕ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಗೌಂಡವಾಡ ಗ್ರಾಮದ ಸತೀಶ ಪಾಟೀಲ ಎಂಬ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಇದರಿಂದ ಗ್ರಾಮಸ್ಥರು ಕಾರು, ದ್ವಿಚಕ್ರ ವಾಹನಗಳು ಮತ್ತು ಹುಲ್ಲಿನ ಬಣವಿಗಳಿಗೆ ಬೆಂಕಿ ಹಚ್ಚಿದ್ದಾರೆ.

ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ನೇತೃತ್ವದ ತಂಡ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.


Gadi Kannadiga

Leave a Reply