ಕೊಪ್ಪಳ ಮೇ ೧೨ : ಕೊಪ್ಪಳ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಅಧೀüನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರೇಸಿಂದೋಗಿ ಮತ್ತು ಗಂಗಾವತಿ ತಾಲೂಕಿನ ಜಮಾಪುರದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳಿಗೆ ೨೦೨೨-೨೩ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಕಾಯದೇ ಹತ್ತಿರದ ವಸತಿ ಶಾಲಾ ಕಾಲೇಜುಗಳಲ್ಲಿ ಅರ್ಜಿ ಸಲ್ಲಿಸಬಹುದು. ಮೇ ೧೨ರಿಂದಲೇ ಅರ್ಜಿಯನ್ನು ನೀಡಲಾಗುತ್ತದೆ. (ಪಿಸಿಎಮ್‌ಬಿ ಮತ್ತು ಪಿಸಿಎಮ್‌ಸಿಎಸ್) ೧೦ನೇ ತರಗತಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಮೆರಿಟ್ ಹಾಗೂ ಸರ್ಕಾರದ ಮೀಸಲಾತಿ ಆಧಾರದ ಮೇಲೆ ಪ್ರವೇಶ ನೀಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನೀತರ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು.
ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. ೨೦೨೨-೨೩ನೇ ಸಾಲೀನ ಪ್ರಥಮ ಪಿಯುಸಿಗೆ ೮೦ ವಿದ್ಯಾರ್ಥಿಗಳಿಗೆ(ಪಿಸಿಎಮ್‌ಬಿ (೪೦) ಮತ್ತು ಪಿಸಿಎಮ್‌ಸಿ(೪೦)) ಪ್ರವೇಶ ನೀಡಲಾಗುವುದು ಶೇ.೫೦ ಸ್ಥಾನಗಳು ವಿದ್ಯಾರ್ಥಿನಿಯರಿಗೆ ಮೀಸಲಿವೆ. ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲಾ ಕಾಲೆಜುಗಳಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಹತ್ತಿರದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಾಲೇಜುಗಳಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರಾದ ಅಮೀನ್‌ಸಾಬ್ ಜಿಲ್ಲಾ ಸಮನ್ವಾಧಿಕಾರಿ ಕೊಪ್ಪಳ ಮೊ:೯೪೮೧೬೬೦೪೫೯., ಪರಶುರಾಮ (ಪ್ರಾಚಾರ್ಯರು), ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಹಿರೇಸಿಂದೋಗಿ ಮೊ: ೯೯೧೬೨೧೬೬೧೪ ಇವರಿಗೆ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಮೊರಾರ್ಜಿ ದೇಸಾಯಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶ ಆರಂಭ
ಮೊರಾರ್ಜಿ ದೇಸಾಯಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶ ಆರಂಭ
Suresh12/05/2023
posted on
More important news
ಬೀಟ್ ಮೀಟಿಂಗ್
29/05/2023
ಸಚಿವ ಎಚ್.ಕೆ.ಪಾಟೀಲ ಅವರ ಜಿಲ್ಲಾ ಪ್ರವಾಸ
29/05/2023
ಶ್ರೀ ಯಾಜ್ಞವಲ್ಕö್ಯ ಗುರುಗಳ ಜಯಂತಿ
29/05/2023
ಅಧಿಕಾರ ಸ್ವೀಕಾರ
29/05/2023