ಗದಗ ಫೆಬ್ರುವರಿ ೨೭: ಜಿಲ್ಲೆಯಲ್ಲಿ ಸಾಕು ಪ್ರಾಣಿಗಳು, ನಾಯಿಗಳ ತಳಿಸಂವರ್ಧನೆ ಹಾಗೂ ಮಾರಾಟ ಮಳಿಗೆಗಳು ಇರುವ ವ್ಯಕ್ತಿ ಅಥವಾ ಸಂಸ್ಥೆಗಳು ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆಯುವ ಮುನ್ನ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳಲು ಜಿಲ್ಲಾ ಪ್ರಾಣಿ ದಯಾ ಸಂಘವು ಸೂಚಿಸಿದೆ. ಅಗತ್ಯ ದಾಖಲೆಗಳೊಂದಿಗೆ ೩೦ ದಿನಗಳ ಒಳಗಾಗಿ ಭರ್ತಿ ಮಾಡಿದ ನಮೂನೆಯಲ್ಲಿ ಶುಲ್ಕದೊಂದಿಗೆ ನೋಂದಣಿ ಮಾಡಿಕೊಳ್ಳಬೇಕು. ಮಾಹಿತಿಗೆ ತಿತಿತಿ.ಞಚಿತಿb.ಞಚಿಡಿಟಿಚಿಣಚಿಞಚಿ.ಟಿiಛಿ.iಟಿ ಸಂಪರ್ಕಿಸಬೇಕೆಂದು ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ, ಗದಗ, ಮುಂಡರಗಿ, ನರಗುಂದ, ರೋಣ ಮತ್ತು ಶಿರಹಟ್ಟಿ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.