This is the title of the web page
This is the title of the web page

Please assign a menu to the primary menu location under menu

Local News

ಚಿರತೆ ಸೆರೆ ಹಿಡಿಯಲು ಇಂದು ಅರಣ್ಯ ಇಲಾಖೆ ಮಾಸ್ಟರ್ ಪ್ಲಾನ್


ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಪತ್ಯಕ್ಷಗೊಂಡಿದ್ದ ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಹಿಡಿಯುವ ನಿರತಂತರ ಪ್ರಯತ್ನದಲ್ಲಿ ತೊಡಗಿದ್ದಾರೆ.ಈಗಾಗಲೇ ಮೂರು ಬಾರಿ ಕಾಣಿಸಿಕೊಂಡಿರುವ ಚಿರತೆಯನ್ನು ಹಿಡಿಯಲು ತಂತ್ರಗಾರಿಕೆ ಹೂಡಿದ್ದಾರೆ.

ಸಿದ್ಧಪಡಿಸಿದ ಮಾಸ್ಟರ್ ಪ್ಲಾನ್​ನಂತೆ ಇಂದು 350 ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಕಾಲದಲ್ಲಿ ಕಾರ್ಯಾಚರಣೆಗೆ ಇಳಿಯಲಿದ್ದಾರೆ.

250 ಎಕರೆ ಪ್ರದೇಶದಲ್ಲಿ ಸುಮಾರು 350 ಅರಣ್ಯ ಇಲಾಖೆ ಸಿಬ್ಬಂದಿಗಳು ಏಕಕಾಲದಲ್ಲಿ ಕೋಬಿಂಗ್ ಕಾರ್ಯಾಚರಣೆ ಆರಂಭಿಸಲಿದ್ದಾರೆ. ಕೋಬಿಂಗ್ ಕಾರ್ಯಾಚರಣೆ ಅಂದರೆ, ಒಂದು ಕಡೆಯಲ್ಲಿ ಬಲೆಯನ್ನು ಹಾಕಿ ಇನ್ನೊಂದು ಕಡೆಯಿಂದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿ ಚಿರತೆಯನ್ನು ಬಲೆಗೆ ಹಾಕುವ ಪ್ಲಾನ್ ಅನ್ನು ರೂಪಿಸಿಕೊಂಡಿದ್ದಾರೆ.

ಈಗಾಗಲೇ ಗಾಲ್ಫ್ ಮೈದಾನದ ತಡೆಗೋಡೆ ಸುತ್ತ ಸುಮಾರು ಮೂರು ಕಿ.ಮೀ. ವರೆಗೆ ಬಲೆಯನ್ನು ಹಾಕಲಾಗಿದೆ. ಹನುಮಾನ್ ನಗರ, ಜಾಧವ್ ನಗರ ಭಾಗದ ಕಡೆಗಳಲ್ಲಿ ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯುವ ಬಲೆ ಹಾಕಿದ್ದಾರೆ.

 


Gadi Kannadiga

Leave a Reply