ಬೆಂಗಳೂರು: ಹಿಜಾಬ್ ಕುರಿತಂತೆ ಹೈಕೋರ್ಟ್ ನೀಡಿರುವಂತ ತೀರ್ಪನ್ನು ಎಲ್ಲರೂ ಪಾಲಿಸಬೇಕು. ಸಂವಿಧಾನಕ್ಕಿಂತ ಧರ್ಮ ದೊಡ್ಡದಲ್ಲ. ಸಂವಿಧಾನವನ್ನು ಗೌರವಿಸುವವರು ತೀರ್ಪು ಗೌರವಿಸಬೇಕು ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.
ಇಂದು ಹಿಜಾಬ್ ವಿವಾದದ ಕುರಿತಂತೆ ಹೈಕೋರ್ಟ್ ತೀರ್ಪು ಪ್ರಕಟಿಸಿರುವ ಬಗ್ಗೆ ಪ್ರತಿಕ್ರಿಯಿಸಿದಂತ ಅವರು, ರಾಜ್ಯ ಸರ್ಕಾರದ ಸಮವಸ್ತ್ರ ನೀತಿಯನ್ನು ಕೋರ್ಟ್ ಎತ್ತಿ ಹಿಡಿದಿದೆ. ಸಂವಿಧಾನವನ್ನು ಗೌರವಿಸುವವರು, ಇಂದಿನ ಹೈಕೋರ್ಟ್ ತೀರ್ಪನ್ನು ಗೌರವಿಸಬೇಕು. ಹಿಜಾಬ್ ವಿವಾದವನ್ನು ಇಲ್ಲಿಗೆ ಬಿಡಬೇಕು ಎಂಬುದಾಗಿ ಹೇಳಿದರು.