ಕೊಪ್ಪಳ ಡಿಸೆಂಬರ್ ೧೪ : ಜಲಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಮುನಿರಾಬಾದ್‌ನ ಕೈಲಾಸ ಬೆಟ್ಟದ ತುದಿಯಲ್ಲಿ ನೂತನ ಅತಿಥಿಗೃಹ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭವನ್ನು ಡಿಸೆಂಬರ್ ೧೫ ರಂದು ಸಾಯಂಕಾಲ ೦೫ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಕಾಮಗಾರಿಯ ಶಂಕುಸ್ಥಾಪನೆಯನ್ನು ರಾಜ್ಯ ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ನೆರವೇರಿಸುವರು. ಕಾರ್ಯಕ್ರಮದ ಘನ ಉಪಸ್ಥಿತಿಯನ್ನು ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಹಾಗೂ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್ ಅವರು ವಹಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಸಂಗಣ್ಣ ಕರಡಿ, ಶಾಸಕರಾದ ಅಮರೇಗೌಡ ಎಲ್. ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ, ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ್, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ಮುನಿರಾಬಾದ್ ಕಾಡಾ ಅಧ್ಯಕ್ಷರಾದ ಕೊಲ್ಲಾ ಶೇಷಗಿರಿರಾವ್, ಮುನಿರಾಬಾದ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕಮಲಾ ಇಸ್ರೇಲ್ ಅವರು ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ.ಅನಿಲ್ ಕುಮಾರ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಕೆ.ಬಿ. ಕುಲಕರ್ಣಿ, ಕರ್ನಾಟಕ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಮಲ್ಲಿಕಾರ್ಜುನ ಬಿ.ಗುಂಗೆ, ಕ.ನೀ.ನಿ.ನಿ. ಮುನಿರಾಬಾದ್ ನೀರಾವರಿ ಕೇಂದ್ರ ವಲಯದ ಮುಖ್ಯ ಅಭಿಯಂತರರಾದ ದುರುಗಪ್ಪ ಕೆ., ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಕ.ನೀ.ನಿ.ನಿ. ಮುನಿರಾಬಾದ್ ತುಂಗಭದ್ರಾ ಯೋಜನೆ ವೃತ್ತದ ಅಧೀಕ್ಷಕ ಅಭಿಯಂತರರಾದ ಬಸವರಾಜ ಎಲ್. ಆಗಮಿಸುವರು ಎಂದು ನಂ.೧ ಟಿ.ಆರ್.ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಕೆ.ಬಿ.ಎಚ್. ಶಿವಶಂಕರ್ ಹಾಗೂ ಮುಖ್ಯ ಕಾಮಗಾರಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಧರ್ಮರಾಜ ಎಲ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಡಿ.೧೫ ರಂದು ಕೈಲಾಸ ಅತಿಥಿಗೃಹ ಕಟ್ಟಡದ ಶಂಕುಸ್ಥಾಪನೆ ಸಮಾರಂಭ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023