This is the title of the web page
This is the title of the web page

Please assign a menu to the primary menu location under menu

State

*ಜ.೨೬ ರಂದು ಕೊಪ್ಪಳದಲ್ಲಿ ಪತ್ರಿಕಾ ಭವನದ ಶಂಕುಸ್ಥಾಪನಾ ಕಾರ್ಯಕ್ರಮ*


ಕೊಪ್ಪಳ ಜನವರಿ ೨೫: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ) ಕೊಪ್ಪಳ ಜಿಲ್ಲಾ ಘಟಕದ ಸಹಯೋಗದಲ್ಲಿ ಪತ್ರಿಕಾ ಭವನದ ಶಂಕು ಸ್ಥಾಪನಾ ಕಾರ್ಯಕ್ರಮವು ಜನವರಿ ೨೬ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಯಶಸ್ವಿನಿ ಲೇಔಟ್ ಈಶಾನ್ಯ ಭಾಗದಲ್ಲಿ ಆಯೋಜಿಸಲಾಗಿದೆ.
ಕೊಪ್ಪಳ ಶ್ರೀ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸುವರು. ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಉದ್ಘಾಟನೆ ನೆರವೇರಿಸುವರು. ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಆಶಯ ನುಡಿಗಳನ್ನಾಡುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್ ಪಾಟೀಲ್ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ ಅನಿಲಕುಮಾರ್, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಅವರು ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ನವದೆಹಲಿಯ ಅಧ್ಯಕ್ಷರಾದ ಬಿ.ವಿ ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಜಿ.ಸಿ ಲೋಕೇಶ್, ಸಂಘದ ರಾಜ್ಯ ಕಾರ್ಯದರ್ಶಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸೋಮಶೇಖರ ಕೆರೆಗೋಡ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾಧ್ಯಕ್ಷರಾದ ಬಸವರಾಜ ತಿಪ್ಪಣ್ಣನವರ (ಗುಡ್ಲಾನೂರು), ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಎಂ.ಸಾದಿಕ್ ಅಲಿ, ರಾಜ್ಯ ಕಾರ್ಯಕಾರಿನಿ ಸದಸ್ಯರಾದ (ವಿಶೇಷ ಆಹ್ವಾನಿತರು) ಎಚ್.ಎಸ್ ಹರೀಶ್, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಸದಸ್ಯರಾದ ಜಿ.ಎಸ್ ಗೋನಾಳ್, ಕ.ಕಾ.ಪ.ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೈ.ನಾಗರಾಜ, ಪತ್ರಿಕಾ ಭವನ ಕಟ್ಟಡ ಸಮಿತಿಯ ಅಧ್ಯಕ್ಷರಾದ ಎನ್.ಎಂ ದೊಡ್ಡಮನಿ, ಕಾರ್ಯದರ್ಶಿಗಳಾದ ಹನುಮಂತ ಹಳ್ಳಿಕೇರಿ, ಕ.ಕಾ.ಪ.ಸಂಘದ ಕೊಪ್ಪಳ ಉಪಾಧ್ಯಕ್ಷರಾದ ರುದ್ರಗೌಡ ಪಾಟೀಲ್, ಜಿಲ್ಲಾ ಕಾರ್ಯದರ್ಶಿಗಳಾದ ವೀರಣ್ಣ ಕಳ್ಳಿಮನಿ, ಸಂಘದ ಜಿಲ್ಲಾ ಖಜಾಂಚಿ ರಾಜು ಬಿ.ಆರ್ ಸೇರಿದಂತೆ ಕ.ಕಾ.ಪ.ಸಂಘದ ಜಿಲ್ಲಾ ಘಟಕದ ಎಲ್ಲಾ ಪದಾಧಿಕಾರಿಗಳು ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಇತರ ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.


Leave a Reply