ಗದಗ ಡಿಸೆಂಬರ್ ೧೭: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಗಳ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅರ್ಹ ಫಲಾನುಭವಿಗಳಿಗೆ ವಸತಿ ಸಹಿತ/ವಸತಿ ರಹಿತವಾಗಿ ಲಘು ವಾಹನ ಚಾಲನಾ ತರಬೇತಿ ಮತ್ತು ಭಾರಿ ವಾಹನ ಚಾಲನಾ ತರಬೇತಿಯನ್ನು ಉಚಿತವಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಪ್ರಾದೇಶಿಕ ತರಬೇತಿ ಕೇಂದ್ರ, ಗೋಕುಲ ರಸ್ತೆ, ಹುಬ್ಬಳ್ಳಿಯಲ್ಲಿ ನಡೆಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ತರಬೇತಿ ಕೇಂದ್ರದ ದೂರವಾಣಿ ಸಂಖ್ಯೆ: ೦೮೩೬-೨೩೩೨೧೨೮ ಹಾಗೂ ತರಬೇತಿ ಕೇಂದ್ರದ ಚಾಲಕ ಬೋಧಕರ ಮೊಬೈಲ್ ದೂರವಾಣಿ ಸಂಖ್ಯೆ: ೯೭೩೯೧೬೬೮೮೫/ ೬೩೬೨೭೬೭೭೨೯/ ೯೯೪೫೭೫೬೬೨೦/ ೭೮೯೨೫೭೭೮೯೨ ನ್ನು ಸಂಪರ್ಕಿಸಲು ಪ್ರಾಂಶುಪಾಲರು, ಪ್ರಾದೇಶಿಕ ತರಬೇತಿ ಕೇಂದ್ರ, ಹುಬ್ಬಳ್ಳಿ,ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Gadi Kannadiga > State > ಉಚಿತ ಚಾಲನಾ ತರಬೇತಿ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023