ಬೆಳಗಾವಿ,ನ.೧೭: ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯ ಸಹಯೋಗದಲ್ಲಿ ನರೇಗಾ ಯೋಜನೆಯಡಿ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು. ತಾಪಂ ಸಹಾಯಕ ನಿರ್ದೇಶಕ ಸಂಗಮೇಶ ರೊಡ್ಡನ್ನವರ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮುದಾಯ ಆರೋಗ್ಯಾಧಿಕಾರಿ ಡಾ.ಸಂಜಯ ಕಬ್ಬೂರ ಅವರು, ಗ್ರಾಮಸ್ಥರು ನರೇಗಾ ಯೋಜನೆಯಡಿ ಹಮ್ಮಿಕೊಂಡಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು. ಆರೋಗ್ಯ ತಪಾಸಣಾ ಶಿಬಿರದಲ್ಲಿ ೬೪ ಜನರು ಭಾಗವಹಿಸಿ ತಪಾಸಣೆ ಮಾಡಿಕೊಂಡರು. ಪಿಡಿಒ ಶಿವಾನಂದ ಗುಡಸೆ, ತಾಂತ್ರಿಕ ಸಂಯೋಜಕ ನಾರ್ಗಾಜುನ ಇಳಿಗೇರ, ಆರೋಗ್ಯ ಅಮೃತ ಅಭಿಯಾನದ ತಾಲೂಕು ಸಂಯೋಜಕ ರವಿ ಶಿರೇವ್ವಗೋಳ, ಡಾಟಾ ಎಂಟ್ರಿ ಆಪರೇಟರ್ ಪ್ರಶಾಂತ, ಬಿಎಫ್ ಟಿ ಮಲ್ಲಿಕಾರ್ಜುನ ಮತ್ತಿತರರು ಉಪಸ್ಥಿತರಿದ್ದರು.
Gadi Kannadiga > Local News > ಉಚಿತ ಆರೋಗ್ಯ ತಪಾಸಣಾ ಶಿಬಿರ