ಬೆಳಗಾವಿ: ಏಪ್ರಿಲ್ 22 ರಿಂದ ಮೇ 18ರವರೆಗೆ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅವರ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂತಿರುಗುವಾಗ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಸಲು ಅವಕಾಶ ಕಲ್ಪಿಸಲಾಗಿದೆ.
ಸಂಸ್ಥೆಯ ಎಲ್ಲ ಚಾಲಕ/ನಿರ್ವಾಹಕರುಗಳಿಗೆ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು “ದ್ವಿತೀಯ ಪಿಯುಸಿ ಪ್ರವೇಶ ಪತ್ರವನ್ನು”ತೋರಿಸಿ ಪ್ರ್ರಯಾಣ ಸಲು ಅನುಮತಿ ನೀಡಲಾಗಿದೆ. ಈ ಬಗ್ಗೆ ಚಾಲಕ, ನಿರ್ವಾಹಕರಿಗೆ ಸೂಚಿಸಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.