This is the title of the web page
This is the title of the web page

Please assign a menu to the primary menu location under menu

State

ಸೆಪ್ಟೆಂಬರ್ ಮಾಹೆಗೆ ಉಚಿತ ಅಕ್ಕಿ ವಿತರಣೆ: ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ


ರಾಯಚೂರು ಸೆ.13,  ಜಿಲ್ಲೆಯ ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಸೆಪ್ಟೆಂಬರ್ ಮಾಹೆಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 05 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ತಿಳಿಸಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಪ್ರತಿ ಅಂತ್ಯೋದಯ (ಎಎವೈ) ಪಡಿತರ ಚೀಟಿಗೆ 35 ಕೆ.ಜಿ ಸಾರವರ್ಧಿತ (ಈoಡಿಣiಜಿieಜ) ಅಕ್ಕಿ ಮತ್ತು ಪಿಹೆಚ್‍ಹೆಚ್ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 05 ಕೆ.ಜಿ ಸಾರವರ್ಧಿತ (ಈoಡಿಣiಜಿieಜ) ಅಕ್ಕಿ ಹಾಗೂ ಉಚಿತವಾಗಿ ವಿತರಿಸಲಾಗುತ್ತದೆ.
ಒಪ್ಪಿಗೆ ಅಥವಾ ಸಮ್ಮತಿ ಸೂಚಿಸಿರುವ ಎಪಿಎಲ್ (ಎನ್‍ಪಿಹೆಚ್‍ಹೆಚ್) ಪಡಿತರ ಚೀಟಿದಾರರಿಗೆ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ 15/- ರೂ.ಗಳಂತೆ ಏಕ ಸದ್ಯಸರ ಪಡಿತರ ಚೀಟಿಗೆ 05 ಕೆ.ಜಿ ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಕುಟುಂಬ ಸದಸ್ಯರಿರುವ ಎಪಿಎಲ್ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.
ಒಂದು ರಾಷ್ಟ್ರ ಒಂದು ಪಡಿತರ ಚೀಟಿ (ಅಂತರ್ ರಾಜ್ಯ ಅಥವಾ ಅಂತರ್ ಜಿಲ್ಲೆ) ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ರಾಜ್ಯದ ಪಡಿತರ ಚೀಟಿದಾರರು ಯಾವುದೇ ವರ್ಗದ ಪಡಿತರ ಚೀಟಿದಾರರು ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಹಾಗೂ ತಾಲ್ಲೂಕಿನಲ್ಲಿರುವ ತಹಶೀಲ್ದಾರ ಕಛೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಛೇರಿಗೆ ದೂರನ್ನು ಸಲ್ಲಿಸಬಹುದಾಗಿದೆ.
ಈ ಯೋಜನೆಗಳಡಿ ವಿತರಿಸಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು ಮತ್ತು ಸದರಿ ಪಡಿತರ ಚೀಟಿಯನ್ನು ಆರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Gadi Kannadiga

Leave a Reply