ಕೊಪ್ಪಳ ಫೆಬ್ರವರಿ ೧೩: ರೈತರಿಂದ ನೇರವಾಗಿ ಗ್ರಾಹಕರಿಗೆ, ರೈತರಿಂದ ಖರೀದಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೊಪಳ ತೋಟಗಾರಿಕೆ ಇಲಾಖೆಯಿಂದ ೭೫ನೇ ಸ್ವಾತಂತ್ರö್ಯದ ಅಮೃತ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಪ್ರಯುಕ್ತ “ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಅಣಬೆ ಹಾಗೂ ಜೇನು’’ ಪ್ರದರ್ಶನ ಮತ್ತು ಮಾರಾಟ ಮೇಳ-೨೦೨೩ನ್ನು ಫೆಬ್ರವರಿ ೧೬ ರಿಂದ ಫೆ. ೧೯ ರವರೆಗೆ ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದು, ಉದ್ಘಾಟನಾ ಸಮಾರಂಭವನ್ನು ಫೆ. ೧೬ರ ಬೆಳಿಗ್ಗೆ ೧೦-೩೦ಕ್ಕೆ ನಡೆಯಲಿದೆ.
ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಉದ್ಘಾಟನೆ ನೆರವೇರಿಸುವರು. ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಘನ ಉಪಸ್ಥಿತರಿರುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್ ಪಾಟೀಲ್, ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷರಾದ ಯಂಕಣ್ಣ ಯರಾಶಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಶಿವಣ್ಣ ಮೂಲಿಮನಿ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ ಅನಿಲಕುಮಾರ್, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರಕುಮಾರ ಕಠಾರಿಯಾ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ, ಬೆಂಗಳೂರು ಲಾಲ್‌ಬಾಗ್ ತೋಟಕಾರಿಕೆ ನಿರ್ದೇಶಕರಾದ ಡಾ ನಾಗೇಂದ್ರ ಪ್ರಸಾದ್, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ ಎಂ.ಹನುಮಂತಪ್ಪ, ಕಲಬುರಗಿ ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕರಾದ ಮಂಜುನಾಥ ನಾರಾಯಣಪುರ, ಮುನಿರಾಬಾದ್ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ ಪಿ.ಎಂ ಗಂಗಾಧರಪ್ಪ, ಕೊಪ್ಪಳ ಕೃಷಿ ವಿಸ್ತರಣಾ ಕ್ಷೇದ್ರದ ವಿಸ್ತರಣಾ ಮುಂದಾಳು ಡಾ ಎಂ.ವಿ ರವಿ, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ ಉಪಸ್ಥಿತರಿರುವರು ಎಂದು ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಸಿ ಉಕ್ಕುಂದ ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಪೂರ್ಣಿಮಾ ಅಂದಾನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಫೆ. ೧೬ ರಿಂದ ವಿವಿಧ ಹಣ್ಣುಗಳ, ಅಣಬೆ, ಜೇನು ಪ್ರದರ್ಶನ ಮತ್ತು ಮಾರಾಟ ಮೇಳ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023