This is the title of the web page
This is the title of the web page

Please assign a menu to the primary menu location under menu

State

ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸಮಾರಂಭ


ಗದಗ ಸೆಪ್ಟೆಂಬರ್ ೧೩: ಗದಗ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಜಿಲ್ಲಾ ಯುವಜನ ಸಂಘಗಳ ಒಕ್ಕೂಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗದಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ೨೦೨೨-೨೩ರ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ ೧೪ ರಂದು ಬೆಳಿಗ್ಗೆ ೯.೩೦ ಗಂಟೆಗೆ ನಗರದ ಕೆ.ಎಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಅವರ ಘನ ಉಪಸ್ಥಿತಿಯಲ್ಲಿ ಜರುಗುವ ಕಾರ್ಯಕ್ರಮವನ್ನು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ ಉದ್ಘಾಟಿಸುವರು. ಗದಗ ಶಾಸಕ ಎಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ರೋಣ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಕಳಕಪ್ಪ ಬಂಡಿ, ಸಂಸದರುಗಳಾದ ಶಿವಕುಮಾರ ಉದಾಸಿ , ಪಿ.ಸಿ. ಗದ್ದಿಗೌಡರ , ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ.ಸಂಕನೂರ, ಪ್ರದೀಪ ಶೆಟ್ಟರ್ , ಸಲೀಂ ಅಹ್ಮದ್ , ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ, ಮಾರ್ಕೆಟಿಂಗ್ ಕಮ್ಯುನಿಕೇಷನ್ ಆಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ನ ಅಧ್ಯಕ್ಷರಾದ ಎಂ.ಎಸ್. ಕರಿಗೌಡ್ರ , ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಉಷಾ ದಾಸರ, ಉಪಾಧ್ಯಕ್ಷರಾದ ಶ್ರೀಮತಿ ಸುನಂದಾ ಬಾಕಳೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿದ್ಧಪ್ಪ ಪಲ್ಲೇದ್ ಆಗಮಿಸುವರು. ವಿಶೇಷ ಆಹ್ವಾನಿತರಾಗಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರಾದ ಎಚ್.ಎನ್.ಗೋಪಾಲಕೃಷ್ಣ, ಜಿಲ್ಲಾಧಿಕಾರಿ ವೈಶಾಲಿ, ಎಂ.ಎಲ್. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುಶೀಲಾ ಬಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಶಿವಪ್ರಕಾಶ ದೇವರಾಜು , ಜಿಲ್ಲಾ ಯುವಜನ ಸಂಘಗಳ ಒಕ್ಕೂಟದ ಅಧ್ಯಕ್ಷ ರವಿಕಾಂತ ಅಂಗಡಿ ಆಗಮಿಸುವರು.


Gadi Kannadiga

Leave a Reply