ಹುಬ್ಬಳ್ಳಿ: ರಾಜ್ಯದ ಸಚಿವ ಡಾ.ಅಶ್ವತ ನಾರಾಯಣ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಹುಬ್ಬಳ್ಳಿಯ ಗಿರೀಶ್ ಗದಿಗೆಪ್ಪಗೌಡರ್ ಅವರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಶ್ರೀ. ಸಿದ್ದರಾಮಯ್ಯನವರನ್ನು ಟಿಪ್ಪು ಸುಲ್ತಾನ್ ನನ್ನು ಉರಿಗೌಡ ಮತ್ತು ನಂಜೇಗೌಡ ಅವರುಗಳು ಮುಗಿಸಿದ ರೀತಿಯಲ್ಲಿ ಮುಗಿಸಬೇಕು ಎಂದು ಮಂಡ್ಯದಲ್ಲಿ ಸಾರ್ವಜನಿಕವಾಗಿ ಭಾಷಣ ಮಾಡಿದ ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವತ್ಥನಾರಾಯಣ ಅವರ ಪ್ರಚೋದನಕಾರಿ ಮಾತುಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ಶ್ರೀ ಸಿದ್ದರಾಮಯ್ಯ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷರಾದ ಶ್ರೀ ಗಿರೀಶ ಗದಿಗೆಪ್ಪಗೌಡರ ಅವರು ಹುಬ್ಬಳ್ಳಿಯಲ್ಲಿ ಇಂದು ಗೋಕುಲ ರೋಡ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದರು.
ಸಚಿವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು ಸಿದ್ದರಾಮಯ್ಯನವರ ಜೀವಕ್ಕೆ ಬೆದರಿಕೆ ಇದ್ದು ಅವರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
Gadi Kannadiga > State > ಸಚಿವ ಅಶ್ವಥ್ ನಾರಾಯಣ ವಿರುದ್ಧ ಗದಿಗೆಪ್ಪಗೌಡರ ದೂರು