This is the title of the web page
This is the title of the web page

Please assign a menu to the primary menu location under menu

State

ಜ್ಞಾನಜ್ಯೋತಿ : ಒಂದು ದಿನದ ಶೈಕ್ಷಣಿಕ ಕಾರ್ಯಗಾರ ಮಕ್ಕಳನ್ನು ಶೈಕ್ಷಣಿಕವಾಗಿ ಸಮರ್ಥಗೊಳಿಸಿ : ಬಿ.ಫೌಜಿಯಾ ತರುನ್ನುಮ್


ಕೊಪ್ಪಳ, ಸೆ. ೩೦: ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ಮಕ್ಕಳನ್ನು ಶೈಕ್ಷಣಿಕವಾಗಿ ಸಮರ್ಥಗೊಳಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರುನ್ನುಮ್ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶುಕ್ರವಾರದಂದು ಜಿಲ್ಲಾಡಳಿತ ಭವನದ ಗಂಟೆಗೆ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಿದ್ದ ಜ್ಞಾನಜ್ಯೋತಿ ಹಾಗೂ ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಅಂಗವಾಗಿ ಕೊಪ್ಪಳ ಜಿಲ್ಲೆಯ ಎಲ್ಲಾ ಸರ್ಕಾರಿ ಅನುದಾನಿತ ಪ್ರೌಢಶಾಲಾ ಮುಖ್ಯೋಪಾಧ್ಯಾಯರುಗಳಿಗೆ, ಸ್ಪೂರ್ತಿಬಂಧು ಹಾಗೂ ಕಲಿಕಾ ಮಿತ್ರರಿಗೆ ಆಯೋಜಿಸಿದ್ದ ಒಂದು ದಿನದ ಶೈಕ್ಷಣಿಕ ಕಾರ್ಯಗಾರವನ್ನು ಉಧ್ಘಾಟಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಎಲ್ಲಾ ಮುಖ್ಯೋಪಾಧ್ಯಯರು ಪ್ರಯತ್ನಿಸಬೇಕು. ಮುಂಬರುವ ೧೦ನೇ ತರಗತಿಯ ಶೈಕ್ಷಣಿಕ ಫಲಿತಾಂಶಕ್ಕಾಗಿ ಪೂರ್ವ ಸಿದ್ದತಾ ಯೋಜನೆಯನ್ನು ರೂಪಿಸಿಕೊಳ್ಳಿ, ೧೦ನೇ ತರಗತಿಯ ಪಠ್ಯವನ್ನು ಡಿಸೆಂಬರ್ ತಿಂಗಳೊಳಗೆ ಪೂರ್ಣಗೊಳಿಸಿ ಜನವರಿಯಿಂದ ಪುನರವರ್ತಿತ ಅಭ್ಯಾಸ ಪ್ರಾರಂಭಿಸಿ ಹಾಗೂ ಪೂರ್ವಭಾವಿ ಪರಿಕ್ಷೆಗಳನ್ನು ನಡೆಸಿ, ವಾರ್ಷಿಕ ಪರಿಕ್ಷಗಳಿಗೆ ನಮ್ಮ ಜಿಲ್ಲೆಯ ಮಕ್ಕಳನ್ನು ಶೈಕ್ಷಣಿಕವಾಗಿ ಸಮರ್ಥಗೊಳಿಸಿ, ಚಿಗುರು ಮೊದಲ ಹಂತದ ಪುಸ್ತಕಗಳನ್ನು ಬಿಡುಗಡೆ ಮಾಡಲಾಗಿದ್ದು, ೨ ಮತ್ತು ೩ನೇ ಹಂತದ ಪುಸ್ತಕಗಳು ಮುದ್ರಣ ಹಂತದಲ್ಲಿವೆ ಎಂದು ಹೇಳಿದರು.
ಪ್ರತಿ ಶಾಲೆಯಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳನ್ನು ಆಯ್ಕೆಮಾಡಿ ಅವರ ಕಲಿಕೆ, ಶೈಕ್ಷಣಿಕ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ. ಈಗಾಗಲೆ ರಾಜ್ಯದಲ್ಲಿ ಅನುಷ್ಠಾನದಲ್ಲಿರುವ ೮ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಸಮರ್ಪಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ಒದಗಿಸಿ. ಸ್ಫೂರ್ತಿಬಂಧು ಮತ್ತು ಕಲಿಕಾಮಿತ್ರರ ಸಹಾಯದಿಂದ ಶಾಲೆಗಳ ಶೈಕ್ಷಣಿಕ ಸುಧಾರಣೆ ಮಾಡಬೇಕು. ಮುಂದಿನ ೧೦ನೇ ತರಗತಿ ಫಲಿತಾಂಶ ಸುಧಾರಣೆಗಾಗಿ ಶಿಕ್ಷಕರು ಪ್ರಾಮಾಣಿಕ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ಎಂದು ಸಿಇಒ ರವರು ಮುಖ್ಯೋಪಾಧ್ಯಾಯರುಗಳಿಗೆ ತಿಳಿ ಹೇಳಿದರು.
ಶ್ರೀ ಗವಿಮಠದ ಪೂಜ್ಯ ಅಭಿನವ ಗವಿಶ್ರೀಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿ, ಶಾಲಾ ಶೈಕ್ಷಣಿಕ ಸುಧಾರಣೆಗಾಗಿ ಜ್ಞಾನಜ್ಯೋತಿ ಕಾರ್ಯಾಗಾರವು ಒಂದು ಉತ್ತಮ ವೇದಿಕೆಯಾಗಿದೆ, ಜಗತ್ತಿನಲ್ಲಿ ಜ್ಞಾನಕ್ಕಿಂತ ದೊಡ್ಡದಾದ ಮತ್ತು ಪವಿತ್ರವಾದ ವಸ್ತುವಿಲ್ಲ, ಜ್ಞಾನಕ್ಕೆ ಸಣ್ಣವರು-ದೊಡ್ಡವರು ಎನ್ನುವ ಬೇಧಭಾವವಿಲ್ಲ, ಒಬ್ಬ ಶಿಕ್ಷಕ ವಿದ್ಯಾರ್ಥಿಗಳ ಭವಿಷ್ಯದ ನಿರ್ಮಾತೃ, ಶಿಕ್ಷಣದ ಮೂಲಕ ಬದಲಾವಣೆ ತರಬಲ್ಲ ವ್ಯಕ್ತಿ ಎಂದರೆ ಅದು ಶಿಕ್ಷಕ ಮಾತ್ರ. ಶಿಕ್ಷಕನಿಗೆ ವೃತ್ತಿ, ವಿಷಯ, ವಿದ್ಯಾರ್ಥಿಯ ಮೇಲೆ ಗೌರವ ಮತ್ತು ಪ್ರೀತಿ ಇರಬೇಕು ಮತ್ತು ಸದಾ ಅಧ್ಯಾಯನಶೀಲನಾಗಿರಬೇಕು. ಪ್ರತಿ ನಿತ್ಯ ಹೊಸ ವಿಚಾರಗಳನ್ನು ತಿಳಿದುಕೊಂಡು ಮೈಗೂಡಿಸಿಕೊಳ್ಳುವುದರಿಂದ ಶಿಕ್ಷಕನ ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ನಿಮ್ಮೆಲ್ಲ ಒತ್ತಡಗಳ ನಡುವೆ ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಎಲ್ಲಾ ಮಕ್ಕಳನ್ನು ಶೈಕ್ಷಣಿಕವಾಗಿ ಸಧೃಡಗೊಳಿಸಿ ಎಂದು ಹೇಳಿದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಎಂ.ಎ ರೆಡ್ಡರ್ ಅವರು ಪ್ರಾಸ್ತವಿಕವಾಗಿ ಮಾತನಾಡಿ, ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಬೇಕು. ಮೊದಲು ವ್ಯವಸ್ಥೆಯನ್ನು ಅರ್ಥಮಾಡಿಕೊಂಡು ಸುಧಾರಣೆಗೆ ಪ್ರಯತ್ನಿಸಿ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಪ್ರಾಮಾಣಿಕವಾಗಿ ನಿಮ್ಮ ಕರ್ತವ್ಯ ನಿರ್ವಹಿಸಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಅಮೀನ್ ಅತ್ತಾರ, ಹಿರಿಯ ಶಿಕ್ಷಣಾಧಿಕಾರಿ ಪೊನ್ನಪ್ಪ ರೆಡ್ಡಿ, ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಧಿಕಾರಿಗಳು ಉಪಸ್ಥಿತರಿದ್ದರು. ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಸ್ಪೂರ್ತಿಬಂಧು ಹಾಗೂ ಕಲಿಕಾ ಮಿತ್ರರು ಈ ಕಾರ್ಯಗಾರದಲ್ಲಿ ಭಾಗವಹಿಸದ್ದರು.


Gadi Kannadiga

Leave a Reply