ಬೆಳಗಾವಿ:ಖಾಸಗಿ ಕಾರ್ಯಕ್ರಮ ನಿಮಿತ್ತ ಬೆಳಗಾವಿಗೆ ಆಗಮಿಸಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬೆಳಗಾವಿಯ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿ ಸ್ಥಳೀಯ ಆರ್ ಎಸ್ ಎಸ್ ನಾಯಕರ ಜೊತೆ ಸಮಾಲೋಚನೆ ನಡೆಸಿದರು.
ಶಾಸ್ತ್ರಿನಗರದಲ್ಲಿರುವ ಆರ್ಎಸ್ಎಸ್ ಕಚೇರಿಗೆ ಭೇಟಿ ನೀಡಿದ ಅವರು, ಆರ್ಎಸ್ಎಸ್ ಮುಖಂಡರ ಭೇಟಿ ಬಳಿಕ ಮಾದ್ಯಮಗಳ ಜೊತೆ ಮಾತನಾಡಿ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಖಾಸಗಿ ಕಾರ್ಯಕ್ರಮ ಒಂದಕ್ಕೆ ಭಾಗವಹಿಸಿ ನಂತರ ಕೊಲ್ಲಾಪುರ ಮಹಾಲಕ್ಷ್ಮಿದೇವಿ ದರ್ಶನಕ್ಕೆ ತೆರಳುತ್ತೇನೆ. ಕೊಲ್ಲಾಪುರದಲ್ಲಿ ನನ್ನ ಸ್ನೇಹಿತರು ಸನ್ಮಾನ ಕಾರ್ಯಕ್ರಮ ಇಟ್ಟುಕೊಂಡಿದ್ದಾರೆ.ಗೋವಾದಲ್ಲಿ ಪ್ರವಾಸೋದ್ಯಮ, ಉದ್ಯೋಗಸೃಷ್ಟಿಗೆ ಹೆಚ್ಚಿನ ಮಹತ್ವ ಕೊಡ್ತೀವಿ ಎಂದರು.