This is the title of the web page
This is the title of the web page

Please assign a menu to the primary menu location under menu

State

ಸೆ.೯ ರಂದು ರಾಷ್ಟ್ರೀಯ ಲೋಕ ಅದಾಲತ್ ರಾಜಿ ಸಂಧಾನÀದ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣವಕಾಶ


ಗದಗ ಸೆ.೨: ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪರಸ್ಪರ ರಾಜಿ ಸಂಧಾನ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರು, ಪಕ್ಷಗಾರರು ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಸುವರ್ಣವಕಾಶವಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ತಿಳಿಸಿದರು.ನಗರದ ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಫರೇನ್ಸ ಹಾಲನಲ್ಲಿ ಎರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸೆ.೯ ರಂದು ಜರುಗಲಿರುವ ರಾಷ್ಟ್ರೀಯ ಲೋಕ ಅದಾಲತ್ ರಾಜಿ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಬಹುದಾಗಿದೆ ಎಂದರು. ರಾಜಿ ಸಂಧಾನ ಪ್ರಕರಣ ಇತ್ಯರ್ಥವಾದರೆ ನ್ಯಾಯಲಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡುವದರ ಜೊತೆಗೆ ಉಭಯ ಪಕ್ಷಗಾರರಿಗೆ ಮೇಲ್ಮನಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇದರಿಂದಾಗಿ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂಧವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು ೧೬ ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು ೧೯೪೨೮ ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ ೨೯೬೫ ಪ್ರಕರಣಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಸಿವಿಲ್ ದಾವೆಗಳಾದ ಜಮೀನುಗಳಿಗೆ, ಮನೆ ಹಾಗೂ ನಿವೇಶನಕ್ಕೆ ವ್ಯಾಜ್ಯಗಳು, ಭೂಸ್ವಾಧೀನ, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕರ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್ ಬೌನ್ಸ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿರುತ್ತದೆ.
ಕಳೆದ ಜುಲೈ-೨೩ ರುಂದ ಜರುಗಿದ ಲೋಕ ಅದಾಲತನಲ್ಲಿ ೨೩೦೮ ಚಾಲ್ತಿ ಪ್ರಕರಣಗಳನ್ನು, ೬೯೪೫ ವ್ಯಾಜ್ಯಪೂರ್ವ ಪ್ರಕರಣಗಳು ಸೇರಿದಂತ ಒಟ್ಟು ೯೨೫೩ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗಿದೆ. ಇದರಲ್ಲಿ ವಿಶೇಷವಾಗಿ ೧೧ ಕೌಟುಂಬಿಕ ಪ್ರಕರಣಗಳನ್ನು ಪುನ: ಒಂದುಗೂಡಿಸಲಾಗಿದೆ ಎಂದು ತಿಳಿಸಿದರು.
ಪ್ರತಿ ದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂಧಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನೆಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಈಗಾಗಲೇ ಸಂಬಂಧಪಟ್ಟ ಇಲಾಖೆಯ ಹಾಗೂ ನಿಗಮ ಮಂಡಳಿಗಳ ಅಧಿಕಾರಿಗೊಂದಿಗೆ ಪೂರ್ವಭಾವಿ ಸಭೆ ಜರುಗಿಸಿ ಹೆಚ್ಚಿನ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ತಿಳಿಯಪಡಿಸಿದೆ.ಪ್ರಕರಣಗಳಿಗೆ ಸಂಬಂಧಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಸೆ. ೯ ರಂದು ಜರುಗುವ ರಾಷ್ಟ್ರೀಯ ಲೋಕ್ ಅದಾಲತನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಲು ಸುವರ್ಣವಕಾಶವಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾದೀಶರಾದ ಬಸವರಾಜ ಅವರು ಕರೇ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕೆ.ಗುರುಪ್ರಸಾದ, ವಾರ್ತಾಧಿಕಾರಿ ವಸಂತ ಮಡ್ಲೂರ ಉಪಸ್ಥಿತರಿದ್ದರು.


Leave a Reply