ಕೊಪ್ಪಳ ಜನವರಿ ೧೭: ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕೊಪ್ಪಳ ಇವರ ಸಹಯೋಗದಲ್ಲಿ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಜನವರಿ ೧೯ ಮತ್ತು ಜ. ೨೦ ರಂದು ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭ ಜ. ೧೯ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ ಘನ ಉಪಸ್ಥಿತರಿರುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಎಲ್.ಪಾಟೀಲ್ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಾಂತೇಶ ಎಸ್ ಪಾಟೀಲ್ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ ಅನಿಲಕುಮಾರ್, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾವ್ಯ ತ್ರಿವೇದಿ ಭಾಗವಹಿಸುವರು.
*ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ:* ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ೨೦೨೨-೨೩ರ ನಿಮಿತ್ತ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಜನವರಿ ೨೦ ಸಂಜೆ ೦೬ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್ ಅವರು ಬಹುಮಾನ ವಿತರಿಸುವರು. ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ ಹಾಗೂ ಉಪವಿಭಾಗಾಧಿಕಾರಿಗಳಾದ ಬಸವಣ್ಣೆಪ್ಪ ಕಲಶೆಟ್ಟಿ ಘನ ಉಪಸ್ಥಿತರಿರುವರು. ಕ.ರಾ. ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾಧ್ಯಕ್ಷರಾದ ನಾಗರಾಜ ಆರ್. ಜುಮ್ಮನ್ನವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿ.ಪಂ ಉಪಕಾರ್ಯದರ್ಶಿಗಳಾದ ಸಮೀರ ಎಂ.ಮುಲ್ಲಾ, ಜಿ.ಪಂ ಮುಖ್ಯ ಲೆಕ್ಕಧಿಕಾರಿಗಳಾದ ಅಮೀನಸಾಬ, ಜಿ.ಪಂ ಮುಖ್ಯ ಯೋಜನಾಧಿಕಾರಿಗಳಾದ ಮಂಜುನಾಥ, ಕ.ರಾ.ಪ್ರಾ.ಶಾ.ಶಿ ಸಂಘ(ರಿ) ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ್, ಸರಕಾರಿ ವಿಕಲಚೇತನರ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಅಲಕನಂದಾ ಮಳಗಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಈಶ್ವರ್ ಸವಡಿ, ಜಿಲ್ಲಾ ಖಜಾನಾಧಿಕಾರಿಗಳಾದ ಎಂ.ಮಹೇಬುಬಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮೃಣಾಲ ಸಹಾಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಾದ ಎಂ.ಎ ರಡ್ಡೇರ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರಾದ ಆರ್.ಎಸ್ ಕಡಿವಾಳ, ಕೆ.ಆರ್.ಡಿ.ಪಿ.ಎಲ್ ಕೊಪ್ಪಳ ಕಾರ್ಯನಿರ್ವಾಹಕ ಅಭಿಯಂತರರಾದ ಚಿಂಚೊಳ್ಕರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣಾ ಉಕ್ಕುಂದ, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪಂಪಾಪತಿ, ಪಂ.ರಾ.ಇ.ವಿ ಕಾರ್ಯನಿರ್ವಾಹಕ ಅಭಿಯಂತರರಾದ ಸೈಯದ್ ಫಜಲ್ ಮೆಹಮೂದ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಎಂ ದೊಡ್ಡಮನಿ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಲಕ್ಷ್ಮೀಕಾಂತ ನಾಲ್ವಾರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ದಿಲೀಪಕುಮಾರ ಬಿ.ಜಿ., ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಚಿದಾನಂದ, ಜಿಲ್ಲಾ ವಿಮಾಧಿಕಾರಿಗಳಾದ ಗೌರೆ ರಾಜಶೇಖರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪದ್ಮಾವತಿ, ಪಶು ಇಲಾಖೆಯ ಉಪನಿರ್ದೇಶಕರಾದ ಡಾ.ನಾಗರಾಜ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಸಹಕಾರ ಇಲಾಖೆ ಉಪ ನಿಬಂಧಕರಾದ ದಸ್ತಗೀರ ಅಲಿ, ಕೊಪ್ಪಳ ತಹಶೀಲ್ದಾರರಾದ ಅಮರೇಶ ಬಿರಾದರ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೈತ್ರಾದೇವಿ ರಡ್ಡೇರ ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕೊಪ್ಪಳ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಧ್ಯಕ್ಷರು, ಸರ್ವ ಪದಾಧಿಕಾರಿಗಳು ಭಾಗವಹಿಸುವರು. ಜಿಲ್ಲೆಯ ರಾಜ್ಯ ಸರಕಾರಿ ವಿಕಲಚೇತನ ನೌಕರರ ಕ್ರೀಡಾಕೂಟವು ಜನವರಿ ೨೦ ರಂದು ಬೆಳಿಗ್ಗೆ ೧೦-೩೦ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Gadi Kannadiga > State > ಜ. ೧೯ ಮತ್ತು ಜ. ೨೦ ರಂದು ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023