ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರಕಾರ ಸ್ವಚ್ಚ ಭಾರತದ ಅಭಿಯಾನದ ಅಡಿ ಕೆಲಸ ಮಾಡಿಸುತ್ತಿರುವ ಪೌರ ಕಾರ್ಮಿಕರ ಬೇಡಿಕೆಯನ್ನು ಈಡೇರಿಸಬೇಕು ಮತ್ತು ಮೃತಪಟ್ಟರ ಪೌರಕಾರ್ಮಿಕರ ಕುಟುಂಬಕ್ಕೆ ಸರಕಾರದಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಪರಿಷತ್ತಿನ ಅಧ್ಯಕ್ಷ ಜಗದೀಶ್ ಹಿರೇಮನಿ ತಿಳಿಸಿದರು.
ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ 41,500 ಜನ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ 10 ಸಾವಿರ ಜನ ಖಾಯಂ ಆಗಿ ಕೆಲಸ ಮಾಡುತ್ತಿದ್ದಾರೆ. ಪೌರ ಕಾರ್ಮಿಕರ ಬೇಡಿಕೆಯನ್ನು ಈಡೇರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ವೇಳೆ 2017ರಲ್ಲಿ ಗುತ್ತಿಗೆ ಪದ್ಧತಿಯಿಂದ ನೇರ ಪಾವತಿಗೆ ಬದಲಾವಣೆ ಮಾಡಲಾಗಿದೆ.ಆದರೆ ವೇತನ ಬಿಟ್ಟು ಬೇರೆ ಸೌಲಭ್ಯ ಪೌರ ಕಾರ್ಮಿಕರಿಗೆ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸುಮಾರು 120 ಜನ ಪೌರ ಕಾರ್ಮಿಕರು ಕೆಲಸ ಮಾಡುವ ಸಂದರ್ಭದಲ್ಲಿ ಮೃತಪಟ್ಟಿದ್ದರೂ ಇಲ್ಲಿಯವರೆಗೆ ಅವರ ಪರಿಹಾರ ಸಿಕ್ಕಿಲ್ಲ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ದೂರಿದರು.