ಕೊಪ್ಪಳ ಡಿಸೆಂಬರ್ ೦೯ : ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಐತಿಹಾಸಿಕ ಆನೆಗೊಂದಿಯ ಕಿಷ್ಕಿಂದದಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್ ಅವರು ಡಿಸೆಂಬರ್ ೦೯ ರಂದು ಭೇಟಿ ನೀಡಿ, ಬೆಟ್ಟದಡಿಯ ಶ್ರೀ ಆಂಜನೇಯ (ಹನುಮಾನ) ಸ್ವಾಮಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು.
ಗೌರವಾನ್ವಿತ ರಾಜ್ಯಪಾಲರಿಗೆ ಸನ್ಮಾನ : ವಿಶೇಷ ಪೂಜೆಯ ಬಳಿಕ ಗೌರವಾನ್ವಿತ ರಾಜ್ಯಪಾಲರಿಗೆ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಗಂಗಾವತಿ ಶಾಸಕರಾದ ಪರಣ್ಣ ಈಶ್ವರಪ್ಪ ಮುನವಳ್ಳಿ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ಉಪವಿಭಾಗಾಧಿಕಾರಿಗಳಾದ ಬಸವಣ್ಣೆಪ್ಪ ಕಲಶೆಟ್ಟಿ, ಡಿವೈಎಸ್‌ಪಿ ರುದ್ರೇಶ್ ಆರ್. ಉಜ್ಜನಕೊಪ್ಪ, ಗಂಗಾವತಿ ತಹಶೀಲ್ದಾರ್ ಹಾಗೂ ಶ್ರೀ ಆಂಜನೇಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಯು.ನಾಗರಾಜ, ಆಡಳಿತಾಧಿಕಾರಿ ಅರವಿಂದ್ ಸುತಗುಂಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Gadi Kannadiga > State > ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲರಾದ ಥಾವರ್ ಚಂದ ಗೆಹ್ಲೋಟ್ ಭೇಟಿ : ವಿಶೇಷ ಪೂಜೆ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023