This is the title of the web page
This is the title of the web page

Please assign a menu to the primary menu location under menu

Local News

ಅಕಾಲಿಕ ಮಳೆಯಿಂದ ಕಬ್ಬು ಬೆಳೆಗಾರರಿಗೆ ಅನುಕೂಲವಾಗಿದೆ: ಗೋವಿಂದ ಕಾರಜೋಳ


ಬೆಳಗಾವಿ: ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲವಾಗಿದೆ. ಶೇ‌೧೦ ರಷ್ಟು ಜನರಿಗೆ ಮಳೆಯಿಂದ ತೊಂದರೆಯಾಗುತ್ತಿದ್ದು

ತೊಂದೆರೆಯಾದ ರೈತರಿ ಸ್ಪಂಧಿಸುವಂತೆ
ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾದ್ಯಮಗಳಿಂದಿಗೆ ಮಾತನಾಡಿದ ಅವರು ಅಕಾಲಿಕ ಮಳೆಯಿಂದ ರೈತರಿಗೆ ಅನುಕೂಲವಾಗಿದ್ದು ಕೆಲವೆಡೆ ಮಾತ್ರ ತೊಂದರೆಯಾಗಿದೆ ಅಂತವರಿಗೆ ಕೂಡಲೇ ಸ್ಪಂಧಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಪದವೀಧರ ಮತ್ತು ಶಿಕ್ಷಕರ ಎರಡೂ ಕ್ಷೇತ್ರದಲ್ಲಿ ಬಿಜೆಪಿ ನಿಶ್ಚಿತವಾಗಿ ಗೆಲುವು ಸಾಧಿಸಲಿದೆ ಹಣಮಂತ ‌ನಿರಾಣಿ ಮತ್ತು
ಅರುಣ್ ಶಹಾಪುರ ಆ್ಯಕ್ಟಿವ್ ಆಗಿದ್ದು, ‌ಶಿಕ್ಷಕೆ ಸಮಸ್ಯೆ ಸ್ಪಂಧನೆ ಮಾಡಿದ್ದಾರೆ ಅದ್ದರಿಂದ ಪದವೀಧರ, ಶಿಕ್ಷಕರ ಎರಡು ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತೇವೆ ಪ್ರಧಾನಿ ಮೋದಿ ಸಾಧನೆ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಜನರ ಬಳಿ ಮತ ಕೇಳುತ್ತೇವೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ಬಣ ರಾಜಕೀಯ ‌ವಿಚಾರಕ್ಕೆ ಪ್ರತಿಕ್ರಿಯಿಸಿ ಬಣ ರಾಜಕೀಯ ಇಲ್ಲ, ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಗೆ ಜಾರಕಿಹೊಳಿ ಸೇರಿ ಎಲ್ಲರೂ ಸಭೆಗೆ ಬರ್ತಾರೆ. ವಿಷಯಾಧಾರಿತ ಭಿನ್ನಪ್ರಾಯ ಸಹಜ ಅದು ಪಕ್ಷದ ಕಾರ್ಯಚಟುವಟಿಕೆಗಳ ಮೇಲೆ ಪರಿಣಾಮ ಬೀರದು ಎಲ್ಲರು ಒಗ್ಗಟ್ಟಾಗಿ ಚುಣಾವನೆ ಎದುರಿಸುತ್ತೇವೆ ಎಂದರು.

ಸಿಎಂ ಆದರೆ ಸಾಲ ಮನ್ನಾ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಯಿಸಿ 2023ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ.
ಇದೇ ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಕಾಂಗ್ರೆಸ್ ಆಡಳಿತ ಮಾಡಿದೆ. ಜನರಿಗೆ ಬೇಕಾಗಿರೋ ಅಕ್ಕಿ ಅಲ್ಲ ಸ್ವಾಭಿಮಾನದ ಬದುಕು ಎಂದು ಸಿದ್ದರಾಮಯ್ಯ ಹೇಳಿಕೆಗೆ ಟಿಕಿಸಿದರು.

ಈ ವೇಳೆ ಸಚಿವೆ ಶಶಿಕಲಾ ಜೊಲ್ಲೆ, ಹಣಮಂತ ನಿರಾಣಿ, ಉಜ್ವಲಾ ಬಡವನಟ್ಟಿ, ಎನ್ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


Gadi Kannadiga

Leave a Reply