This is the title of the web page
This is the title of the web page

Please assign a menu to the primary menu location under menu

Local News

ಅಪಘಾತಕ್ಕೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ಬಲಿ


ಬೆಳಗಾವಿ : ಹುಕ್ಕೇರಿ ತಾಲೂಕಿನ ಸಲಾಮವಾಡ ಗ್ರಾಮ ಪಂಚಾಯತಿ ಕಾರ್ಯದರ್ಶಿಯಾಗಿದ್ದ ಚಾಂದಪಟೇಲ್ ಮಸರ್ಕಲ್ (26) ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅವರು ಭಾನುವಾರ ರಾತ್ರಿ ಕೋಟ ಗ್ರಾಮದಿಂದ ದಡ್ಡಿಯತ್ತ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದರು. ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಅನುಕಂಪದ ಆಧಾರದಲ್ಲಿ ಚಾಂದಪಟೇಲ್ ಅವರಿಗೆ ನೌಕರಿ ನೀಡಲಾಗಿತ್ತು. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Gadi Kannadiga

Leave a Reply